ಉಡುಪಿ: SIR ಪ್ರಕ್ರಿಯೆಯಲ್ಲಿ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯಲು ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದೆ.
ರಮೇಶ್ ಕಾಂಚನ್ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಸೂಕ್ತ ದಾಖಲೆಗಳಿಲ್ಲದ ಹಾಗೂ ಬಾಡಿಗೆ ಮನೆಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯಲು ವಿಳಂಬವಾಗುತ್ತಿದೆ ಎಂದು ಆರೋಪಿಸಲಾಗಿದೆ.
ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ, ಅರ್ಜಿ ಸಲ್ಲಿಸಿದ ಕೂಡಲೇ ನಿಯಮಾನುಸಾರ ವಾಸ್ತವ್ಯ ದೃಢೀಕರಣ ಪತ್ರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸಲಾಯಿತು.

