ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಹಾಗೂ ಶ್ರೀ ಉತ್ತರಾದಿ ಮಠದ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು.
ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಸಹಯೋಗದಲ್ಲಿ ಶಿಬಿರ ನಡೆಯಿತು.
ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶಿಬಿರವನ್ನು ಉದ್ಘಾಟಿಸಿದರು. ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ಹಾಗೂ ಅಗತ್ಯವಿರುವವರಿಗೆ ಶಸ್ತ್ರಚಿಕಿತ್ಸಾ ಸೌಲಭ್ಯ ಒದಗಿಸಲಾಯಿತು.

