ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವ–2026ರ ಹಿನ್ನೆಲೆಯಲ್ಲಿ ಶಾಂತಿಯುತ ಆಚರಣೆಗೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಜಿಲ್ಲೆಯಲ್ಲಿ ಒಟ್ಟು 492 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, 415 ಸಾಮಾನ್ಯ, 74 ಸೂಕ್ಷ್ಮ ಹಾಗೂ 3 ಅತಿಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ.
ಸೆಪ್ಟೆಂಬರ್ 14ರಿಂದ 29ರವರೆಗೆ ವಿವಿಧ ದಿನಗಳಲ್ಲಿ ವಿಸರ್ಜನೆ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 611 ಮಂದಿಯ ವಿರುದ್ಧ ಕ್ರಮ ಕೈಗೊಂಡು, 487 ಮಂದಿಯನ್ನು ಬಾಂಡ್ ಓವರ್ ಮಾಡಲಾಗಿದೆ.
ಜಿಲ್ಲೆಯಾದ್ಯಂತ 22 ಶಾಂತಿ ಸಮಿತಿ ಸಭೆಗಳನ್ನು ನಡೆಸಲಾಗಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ನಿಯಂತ್ರಣಕ್ಕಾಗಿ 996 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ 3 ಡ್ರೋನ್ ತಂಡಗಳು ಹಾಗೂ 12 ಪಿಎ ವ್ಯವಸ್ಥೆಗಳನ್ನು ಬಳಸಲಾಗುತ್ತಿದೆ.
ನಿಗದಿತ ಮಾರ್ಗ ಹಾಗೂ ಸ್ಥಳಗಳಲ್ಲೇ ವಿಸರ್ಜನೆ ನಡೆಸಿ, ಪೊಲೀಸ್ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರು ಹಾಗೂ ಗಣೇಶೋತ್ಸವ ಸಮಿತಿಗಳಿಗೆ ಮನವಿ ಮಾಡಿದೆ.

