ಕಾರ್ಕಳ: ಶಾಸಕ ಸುನೀಲ್ ಕುಮಾರ್ ಅವರ ತಲೆ ಕತ್ತರಿಸಿರುವ ರೀತಿಯಲ್ಲಿ ಫೋಟೋ ಬಳಸಿ ಪ್ರಚೋದನಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.
ಫೇಸ್ಬುಕ್ನಲ್ಲಿ ಅವಾಚ್ಯ ಶಬ್ದ ಹಾಗೂ ಪ್ರಚೋದನಕಾರಿ ಹಾಡು ಬಳಸಿ ವಿಡಿಯೋ ಹರಿಬಿಟ್ಟಿರುವ ಬಗ್ಗೆ ವಿಘೇಶ್ ಪ್ರಸಾದ್ ರಾವ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಪ್ರಸಾದ್ ಶೆಟ್ಟಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆಯ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

