ಮಂಗಳೂರು: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಚಿತ್ರ ರಂಗೋಲಿಯಲ್ಲಿ ಮೂಡಿದೆ.
ಮೂಲತಃ ಉಡುಪಿಯ ಒಳಕಾಡಿನವರಾದ, ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ರಂಗೋಲಿ ಕಲಾವಿದೆ ವೀಣಾ ಐತಾಳ್ ಅವರು ತಮ್ಮ ಸ್ವಗೃಹದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಂಗೋಲಿ ಚಿತ್ರವನ್ನು ರಚಿಸಿದ್ದಾರೆ.
ಕರಾವಳಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ರಂಗೋಲಿ ಚಿತ್ರವನ್ನು ಸಿದ್ಧಪಡಿಸಲಾಗಿದ್ದು, ಕಲಾಭಿಮಾನಿಗಳ ಗಮನ ಸೆಳೆದಿದೆ.
ಈ ಚಿತ್ರವನ್ನು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಲು ಸಿದ್ಧತೆ ನಡೆಸಲಾಗಿದೆ.
ಇದೇ ವೇಳೆ ಮಂಗಳೂರಿನ ಪಡೀಲ್ನಲ್ಲಿರುವ ಜಿಲ್ಲಾ ಆಡಳಿತ ಕಚೇರಿಯಲ್ಲಿ 20×20 ಅಡಿ ಬೃಹತ್ ರಂಗೋಲಿಯಲ್ಲಿ ಕಂಬಳ ಹಾಗೂ ಯಕ್ಷಗಾನದ ಚಿತ್ರಗಳನ್ನು ರಚಿಸಿ ಮುಖ್ಯಮಂತ್ರಿಯನ್ನು ಸ್ವಾಗತಿಸಲು ಜಿಲ್ಲಾಡಳಿತ ಸಜ್ಜಾಗಿದೆ. ರಂಗೋಲಿ ಕಲಾವಿದೆ ವೀಣಾ ಐತಾಳ್ ಅವರು ಈ ಕಾರ್ಯಕ್ಕಾಗಿ ಉತ್ಸಾಹದಿಂದ ಸಿದ್ಧತೆ ನಡೆಸುತ್ತಿದ್ದಾರೆ.

