ಉಡುಪಿ: ಮಣಿಪಾಲದ ಲೇಕ್ವ್ಯೂ ಕಟ್ಟಡದಲ್ಲಿರುವ ಜನರಲ್ ಸ್ಟೋರ್ನಲ್ಲಿ ಮೊಬೈಲ್ ಫೋನ್ ಕಳವು ಮಾಡಿರುವ ಘಟನೆ ನಡೆದಿದೆ.
ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಮೊಬೈಲ್ ಕಳವು ಮಾಡಿದ್ದು, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸಿಸಿಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿಯ ಗುರುತು ಪತ್ತೆಗೆ ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಲಾಗಿದೆ. ಈತನ ಬಗ್ಗೆ ಮಾಹಿತಿ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
