ಬೆಂಗಳೂರು: ರೇಷನ್ ಕಾರ್ಡ್ ಫಲಾನುಭವಿಗಳ ಮರು ಇ-ಕೆವೈಸಿಗೆ ಸೆಪ್ಟೆಂಬರ್ 30 ಅಂತಿಮ ಗಡುವಾಗಿದ್ದು, ಇನ್ನು 15 ದಿನ ಮಾತ್ರ ಬಾಕಿ ಉಳಿದಿವೆ. ರಾಜ್ಯದಲ್ಲಿ 2.67 ಕೋಟಿ ಅರ್ಹ ಫಲಾನುಭವಿಗಳ ಪೈಕಿ ಇದುವರೆಗೆ 97.54 ಲಕ್ಷ ಮಂದಿ ಮಾತ್ರ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ.
ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಯಿಂದ ಇ-ಕೆವೈಸಿ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್ ಅರ್ಷದ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದ್ದಾರೆ.
ಇನ್ನು ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಫೇಸ್ ಆಥೆಂಟಿಕೇಶನ್ ಮೂಲಕ ಮೊಬೈಲ್ನಲ್ಲೇ ಇ-ಕೆವೈಸಿ ಮಾಡಿಕೊಳ್ಳುವ ವಿಶೇಷ ಆ್ಯಪ್ ಅನ್ನು ಮುಂದಿನ ಒಂದು ವಾರದಲ್ಲಿ ಬಿಡುಗಡೆ ಮಾಡಲು ಇಲಾಖೆ ಮುಂದಾಗಿದೆ.

