ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಸೆಪ್ಟೆಂಬರ್ 17ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಉಡುಪಿಯ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ವಿನಯ್ ಕುಮಾರ್ ಸೊರಕೆ, ಐವನ್ ಡಿ’ಸೋಜಾ, ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

