ಉಡುಪಿ: ಕರ್ನಾಟಕ ಸರ್ಕಾರದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಉಡುಪಿಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಅಶೋಕ್ ಕುಮಾರ್ ಕೊಡವೂರು, ಎಂ.ಎ. ಗಫೂರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಸಚಿವ ಕೆ.ಎಸ್. ಬಸವಂತಪ್ಪ ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

