ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಪೂರ್ಣಕುಂಭ ಸ್ವಾಗತದೊಂದಿಗೆ ಸಿಎಂ ಅವರನ್ನು ಬರಮಾಡಿಕೊಳ್ಳಲಾಗಿದ್ದು, ವಿವಿಧ ಕಲಾತಂಡಗಳಿಂದ ಭವ್ಯ ಸ್ವಾಗತ ನೀಡಲಾಯಿತು.
ಸಿಎಂ ಪರವಾಗಿ ಶ್ರೀ ಮಂಜುನಾಥ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಲಾಯಿತು. ಬಳಿಕ ಡಿ.ಕೆ. ಶಿವಕುಮಾರ್ ಅವರ ವತಿಯಿಂದ ದೇವಸ್ಥಾನದಲ್ಲಿ ಮಧ್ಯಾಹ್ನದ ಅನ್ನದಾನ ಸೇವೆ ನಡೆಯಿತು.

