ಬೆಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್ವರ್ಕ್ ವ್ಯತ್ಯಯ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಸಮಸ್ಯೆ ಪರಿಹರಿಸಲು ಅಗತ್ಯ ತಾಂತ್ರಿಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಸಿಗ್ನಲ್ ಜಾಮರ್ಗಳಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲೂ ನೆಟ್ವರ್ಕ್ ಮೇಲೆ ಪರಿಣಾಮ ಬೀರುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಂಟಿ ತಾಂತ್ರಿಕ ಸಮೀಕ್ಷೆ ನಡೆಸಿ, ಜಾಮರ್ಗಳ ಸಾಮರ್ಥ್ಯ ಹಾಗೂ ಆಂಟೆನಾ ವಿನ್ಯಾಸದಲ್ಲಿ ಅಗತ್ಯ ಹೊಂದಾಣಿಕೆ ಮಾಡಲಾಗಿದೆ.
ಕಾರಾಗೃಹದ ಭದ್ರತೆಗೆ ಧಕ್ಕೆಯಾಗದಂತೆ, ಸಾರ್ವಜನಿಕರಿಗೆ ಉಂಟಾಗುತ್ತಿರುವ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಕಡಿಮೆ ಮಾಡಲು ಟೆಲಿಕಾಂ ಸೇವಾ ಪೂರೈಕೆದಾರರೊಂದಿಗೆ ಸಮನ್ವಯದಲ್ಲಿ ಮತ್ತಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

