ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯನ್ನಾಗಿ ಘೋಷಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವ ಸರ್ಕಾರಕ್ಕೆ ಉಡುಪಿ ತುಳುಕೂಟ ಅಭಿನಂದನೆ ಸಲ್ಲಿಸಿದೆ.
ಉಡುಪಿ ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಸರ್ಕಾರ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿದೆ ಎಂದು ಅವರು ಹೇಳಿದ್ದಾರೆ.
ಈ ನಿರ್ಧಾರ ತುಳುವರಿಗೆ ಐತಿಹಾಸಿಕ ದಿನವಾಗಿದ್ದು, ತುಳು ಭಾಷೆಯ ಸಮಗ್ರ ಬೆಳವಣಿಗೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
ತುಳು ಭಾಷೆಗೆ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ತುಳು ಸಂಘ-ಸಂಸ್ಥೆಗಳಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

