ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ರಮಾನಾಥ ರೈ ಸೇರಿದಂತೆ ಕೆಲ ಪ್ರಯಾಣಿಕರಿಗೆ ಗಾಯಗಳಾಗಿವೆ.ಗಾಯಗೊಂಡ ರಮಾನಾಥ ರೈ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

