ಉಪ್ಪಿನಂಗಡಿ: ಪೆರ್ನೆಯ ಮೈರಕಟ್ಟೆಯಲ್ಲಿ ಇಬ್ಬರು ಮಕ್ಕಳನ್ನು ಬಾವಿಗೆಸೆದು, ಓರ್ವ ಮಗುವಿನ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಬಂಧಿತಳಾಗಿರುವ ನೂರುನ್ನಿಸಾಗೆ ಪುತ್ತೂರು ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ನೂರುನ್ನಿಸಾ ತನ್ನ ಸುಮಾರು ಮೂರುವರೆ ವರ್ಷದ ಹೆಣ್ಣು ಮಗು ಹಾಗೂ ಪತಿಯ ತಂಗಿಯ ಮೂರು ವರ್ಷದ ಗಂಡು ಮಗುವನ್ನು ಬಾವಿಗೆ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ.
ಸ್ಥಳೀಯರು ಕೂಡಲೇ ಮಕ್ಕಳನ್ನು ಬಾವಿಯಿಂದ ಮೇಲಕ್ಕೆತ್ತಿದರೂ, ರಬೀಜ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಮತ್ತೊಂದು ಮಗುವಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

