ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕಿನ ದೊಡ್ಡಬರಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು 60 ವರ್ಷದ ವೀರಭದ್ರೆಗೌಡ ಎಂದು ಗುರುತಿಸಲಾಗಿದೆ. ಬೈಕ್ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ದಾರಿಯಲ್ಲಿ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವೀರಭದ್ರೆಗೌಡ ಮೃತಪಟ್ಟಿದ್ದಾರೆ. ಘಟನೆ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಕಾಡಾನೆ ದಾಳಿಯಿಂದಾಗಿ ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

