ಮಂಗಳೂರು: ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಚೀಟಿಂಗ್ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಒಟ್ಟು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಾಲಕೃಷ್ಣ, ಅದರ ಮೊದಲ ಕಂತಾಗಿ ₹5 ಸಾವಿರ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಹಣ ಸ್ವೀಕರಿಸುತ್ತಿದ್ದಾಗಲೇ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

