ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಹಾಗೂ ನೂತನ ವಿದ್ಯಾರ್ಥಿ ನಿಲಯ ಉದ್ಘಾಟನೆ ಸೆಪ್ಟೆಂಬರ್ 25ರಂದು ಉಚ್ಚಿಲದಲ್ಲಿ ನಡೆಯಲಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದು, ಸಚಿವ ರಿಜ್ವಾನ್ ಅರ್ಷದ್ ಗುರಿಕಾರರಿಗೆ ಗೌರವಧನ ವಿತರಿಸಲಿದ್ದಾರೆ.
ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಶಪಾಲ್ ಸುವರ್ಣ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

