ಮೇಷ
ಇಂದು ಮೇಷ ರಾಶಿಗೆ ಬಹಳ ಶುಭ ದಿನವಾಗಲಿದೆ. ಹೊಸ ಆಸ್ತಿ ಅಥವಾ ವಾಹನ ಖರೀದಿಸುವ ಸಾಧ್ಯತೆ ಇದೆ. ಆದರೆ ಕುಟುಂಬ ಜೀವನದಲ್ಲಿ ಕೆಲವು ಸಮಸ್ಯೆಗಳು ಎದುರಾಗಬಹುದು. ಕುಟುಂಬದ ಸದಸ್ಯರೊಬ್ಬರ ಮಾತುಗಳು ನಿಮಗೆ ನೋವುಂಟು ಮಾಡಬಹುದು. ಹಳೆಯ ಸ್ನೇಹಿತರನ್ನು ಭೇಟಿಯಾಗುವಿರಿ. ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಲಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾದರೆ ಚಿಂತನಶೀಲವಾಗಿ ನಿರ್ಧಾರ ತೆಗೆದುಕೊಳ್ಳಿ.
ವೃಷಭ
ಇಂದು ಹೆಚ್ಚಿನ ಖರ್ಚಿನಿಂದ ಮನಸ್ಸಿಗೆ ಚಿಂತೆ ಉಂಟಾಗಬಹುದು. ಮಹಿಳೆಯರು ಸಂಬಂಧಿಕರಿಂದ ಕೆಲವು ತೊಂದರೆಗಳನ್ನು ಎದುರಿಸಬೇಕಾಗಬಹುದು. ಕುಟುಂಬ ಸದಸ್ಯರ ಆರೋಗ್ಯದ ಕಡೆ ಗಮನ ಕೊಡಿ. ಸಂಗಾತಿಯೊಂದಿಗೆ ಪ್ರಣಯ ಭೋಜನಕ್ಕೆ ಯೋಜನೆ ಮಾಡಬಹುದು. ಇದರಿಂದ ಪ್ರೀತಿಯ ಸಂಬಂಧದಲ್ಲಿ ಮಾಧುರ್ಯ ಹೆಚ್ಚಲಿದೆ. ಕೆಲಸದ ಜವಾಬ್ದಾರಿಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ. ಖರ್ಚುಗಳನ್ನು ನಿಯಂತ್ರಿಸಿ, ಹೊಸ ಹಣಕಾಸು ಯೋಜನೆ ರೂಪಿಸಿ ಬಜೆಟ್ಗೆ ಅನುಗುಣವಾಗಿ ಹಣ ಖರ್ಚು ಮಾಡಿ.
ಮಿಥುನ
ಇಂದು ವೈವಾಹಿಕ ಜೀವನದಲ್ಲಿ ಸಂತೋಷ ನೆಲೆಸಲಿದೆ. ಸಂಬಂಧಗಳಲ್ಲಿ ಪ್ರೀತಿ ಮತ್ತು ಆತ್ಮೀಯತೆ ಹೆಚ್ಚಾಗಲಿದೆ. ಹಣಕಾಸಿನ ವಿಚಾರದಲ್ಲಿ ಬುದ್ಧಿವಂತಿಕೆಯಿಂದ ನಡೆದುಕೊಳ್ಳಿ ಮತ್ತು ಖರ್ಚುಗಳ ಮೇಲೆ ನಿಗಾ ಇರಲಿ. ಉದ್ಯೋಗಸ್ಥರು ಸವಾಲಿನ ಕೆಲಸಗಳನ್ನು ಎಚ್ಚರಿಕೆಯಿಂದ ನಿಭಾಯಿಸಬೇಕು. ವೃತ್ತಿಜೀವನದಲ್ಲಿ ಸಕಾರಾತ್ಮಕ ಮನೋಭಾವದಿಂದ ಮುನ್ನಡೆಯಿರಿ. ಇದರಿಂದ ಪ್ರಗತಿ ಮತ್ತು ಬಡ್ತಿಗೆ ಅವಕಾಶಗಳು ದೊರೆಯಬಹುದು. ಅವಿವಾಹಿತರಿಗೆ ಇಂದು ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ.
ಕರ್ಕ
ಇಂದು ಹಣದ ವ್ಯವಹಾರಗಳಿಂದ ದೂರವಿರುವುದು ಉತ್ತಮ. ನೀಡಿದ ಹಣವನ್ನು ಮರಳಿ ಪಡೆಯುವಲ್ಲಿ ತೊಂದರೆ ಎದುರಾಗಬಹುದು. ವ್ಯಾಪಾರದಲ್ಲಿ ಯಾವುದೇ ಅಪಾಯವನ್ನು ತೆಗೆದುಕೊಳ್ಳಬೇಡಿ. ಹೊಸ ಯೋಜನೆ ಆರಂಭಿಸುವುದನ್ನು ಮುಂದೂಡುವುದು ಒಳಿತು. ಆಸ್ತಿಯಲ್ಲಿ ಹೂಡಿಕೆ ಮಾಡುವ ಮೊದಲು ಸಂಪೂರ್ಣವಾಗಿ ಪರಿಶೀಲಿಸಿ. ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಬಹುದು. ವೈವಾಹಿಕ ಜೀವನದಲ್ಲಿ ಸಂತೋಷವಿದ್ದು, ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ.
ಸಿಂಹ
ಸಿಂಹ ರಾಶಿಯವರಿಗೆ ಇಂದು ಹೊಸ ವ್ಯವಹಾರ ಆರಂಭಿಸಲು ಉತ್ತಮ ಅವಕಾಶ ದೊರೆಯಬಹುದು. ಸ್ವ-ಆರೈಕೆಗೆ ಸಮಯ ನೀಡಿ. ಕೆಲಸದ ಸ್ಥಳದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ನಿಮ್ಮ ಹೆಗಲೇರಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆ ಇದೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಮತ್ತು ಸ್ನೇಹಿತರ ಬೆಂಬಲದಿಂದ ಹಲವು ಸಮಸ್ಯೆಗಳು ಪರಿಹಾರವಾಗಲಿವೆ. ವೃತ್ತಿಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಸಂಭವಿಸಬಹುದು. ಉನ್ನತ ಅಧಿಕಾರಿಗಳ ಬೆಂಬಲ ದೊರೆಯಲಿದ್ದು, ಕಚೇರಿ ರಾಜಕೀಯದಿಂದ ದೂರವಿರಿ.
ಕನ್ಯಾ
ಈ ದಿನ ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡಲಿದೆ. ಕುಟುಂಬ ಸದಸ್ಯರೊಂದಿಗೆ ಕೆಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ನಿಮ್ಮ ಮಾತಿನ ಮೇಲೆ ಹಿಡಿತವಿರಲಿ ಮತ್ತು ಯೋಚಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯಮಿಗಳು ಹೂಡಿಕೆಗೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಅಪಾಯಕಾರಿ ಯೋಜನೆಗಳನ್ನು ಆರಂಭಿಸುವುದನ್ನು ತಪ್ಪಿಸಿ. ಕುಟುಂಬ ಸದಸ್ಯರ ಬೆಂಬಲದಿಂದ ಕೆಲಸದಲ್ಲಿನ ಅಡೆತಡೆಗಳು ದೂರವಾಗಲಿವೆ. ಕೆಲವರಿಗೆ ಕೆಲಸದ ಸ್ಥಳದಿಂದ ಒಳ್ಳೆಯ ಸುದ್ದಿ ಸಿಗಬಹುದು. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ.
ತುಲಾ
ಇಂದು ನಿಮ್ಮಲ್ಲಿ ಶಕ್ತಿ ಮತ್ತು ಉತ್ಸಾಹ ಹೆಚ್ಚಾಗಲಿದೆ. ಹೊಸ ಯೋಜನೆಯ ಜವಾಬ್ದಾರಿ ನಿಮ್ಮ ಹೆಗಲೇರಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ. ಆದಾಗ್ಯೂ, ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಯಾರನ್ನೂ ಕುರುಡಾಗಿ ನಂಬಬೇಡಿ. ಇದರಿಂದ ಆರ್ಥಿಕ ನಷ್ಟ ಉಂಟಾಗಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ವೃತ್ತಿಜೀವನದಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಕುಟುಂಬದವರೊಂದಿಗೆ ಹಂಚಿಕೊಳ್ಳಿ. ಅವರ ಸಲಹೆ ಸಮಸ್ಯೆ ಪರಿಹಾರಕ್ಕೆ ಸಹಾಯ ಮಾಡಬಹುದು.
ವೃಶ್ಚಿಕ
ಇಂದು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡುವ ಅವಕಾಶ ಸಿಗಬಹುದು. ಕಚೇರಿಯಲ್ಲಿ ವಿರೋಧಿಗಳು ಸಕ್ರಿಯರಾಗಿರುವುದರಿಂದ ಕೆಲವು ಗೊಂದಲಗಳು ಉಂಟಾಗಬಹುದು. ಅವಿವಾಹಿತರು ವಿಶೇಷ ವ್ಯಕ್ತಿಯನ್ನು ಭೇಟಿಯಾಗುವ ಸಾಧ್ಯತೆ ಇದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ತಂದೆಯ ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ಕೋಪವನ್ನು ನಿಯಂತ್ರಿಸಿ ಮತ್ತು ಅನಗತ್ಯ ಒತ್ತಡಕ್ಕೆ ಒಳಗಾಗಬೇಡಿ.
ಧನು
ಇಂದು ನಿಮಗೆ ತುಂಬಾ ಶುಭ ದಿನವಾಗಲಿದೆ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡವನ್ನು ಅನುಭವಿಸಬಹುದು. ಆಪ್ತ ಸ್ನೇಹಿತರ ಸಹಾಯದಿಂದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿವೆ. ಕುಟುಂಬದೊಂದಿಗೆ ಇದ್ದಕ್ಕಿದ್ದಂತೆ ಪ್ರವಾಸಕ್ಕೆ ಯೋಜನೆ ರೂಪಿಸುವ ಸಾಧ್ಯತೆ ಇದೆ. ಆದರೆ ಸಂಬಂಧಗಳಲ್ಲಿ ತಪ್ಪು ತಿಳುವಳಿಕೆ ಹೆಚ್ಚಾಗಬಹುದು. ತಾಳ್ಮೆಯಿಂದಿದ್ದು, ಬುದ್ಧಿವಂತಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಮಕರ
ಇಂದು ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಹೂಡಿಕೆ ಮಾಡುವಾಗ ಎಚ್ಚರಿಕೆ ವಹಿಸಿ ಮತ್ತು ಹಣಕಾಸಿನ ವಿಚಾರದಲ್ಲಿ ಅನಗತ್ಯ ಅಪಾಯ ತೆಗೆದುಕೊಳ್ಳಬೇಡಿ. ಸಂಬಂಧಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ ಕಾಡಬಹುದು. ಕೆಲಸದ ಸ್ಥಳದಲ್ಲಿ ಸಣ್ಣಪುಟ್ಟ ಸವಾಲುಗಳು ಎದುರಾಗಬಹುದು. ಹೊಸ ಯೋಜನೆಯ ಜವಾಬ್ದಾರಿ ತೆಗೆದುಕೊಳ್ಳಲು ಹಿಂಜರಿಯಬೇಡಿ. ಇದರಿಂದ ಪ್ರಗತಿಗೆ ಹೊಸ ಅವಕಾಶಗಳು ದೊರೆಯಬಹುದು.
ಕುಂಭ
ಕುಂಭ ರಾಶಿಯವರಿಗೆ ಇಂದು ದಿನದ ಆರಂಭದಲ್ಲಿ ಸ್ವಲ್ಪ ನಿರಾಶೆಯ ಭಾವನೆ ಕಾಡಬಹುದು. ಆದರೂ ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ವ್ಯಾಪಾರಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗೊಂದಲ ಉಂಟಾಗಬಹುದು. ಅವಿವಾಹಿತರ ಜೀವನದಲ್ಲಿ ವಿಶೇಷ ವ್ಯಕ್ತಿಯ ಪ್ರವೇಶವಾಗುವ ಸಾಧ್ಯತೆ ಇದೆ. ಉದ್ಯೋಗ ಹುಡುಕುತ್ತಿರುವವರಿಗೆ ಕೆಲವು ತೊಂದರೆಗಳು ಎದುರಾಗಬಹುದು. ಆರೋಗ್ಯದ ಕಡೆ ಗಮನ ಕೊಡಿ. ಕೆಲವರಿಗೆ ಹೊಟ್ಟೆಗೆ ಸಂಬಂಧಿಸಿದ ಸಣ್ಣಪುಟ್ಟ ಸಮಸ್ಯೆಗಳು ಕಾಡಬಹುದು.
ಮೀನ
ಇಂದು ನಿಮ್ಮ ದಿನವು ಸಾಮಾನ್ಯವಾಗಿರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ. ವೃತ್ತಿಪರ ಜೀವನದಲ್ಲಿ ಹೆಚ್ಚುವರಿ ಜವಾಬ್ದಾರಿಗಳನ್ನು ನಿರ್ವಹಿಸಲು ಸಿದ್ಧರಾಗಿರಿ. ಕೆಲವರು ಸವಾಲಿನ ಕೆಲಸಗಳನ್ನು ನಿಭಾಯಿಸುವಲ್ಲಿ ತೊಂದರೆ ಎದುರಿಸಬಹುದು. ಅಗತ್ಯ ಗೃಹೋಪಯೋಗಿ ವಸ್ತುಗಳು ಅಥವಾ ಎಲೆಕ್ಟ್ರಾನಿಕ್ ಸಾಧನಗಳನ್ನು ಖರೀದಿಸಲು ಯೋಜಿಸಬಹುದು. ಆದಾಯ ಹೆಚ್ಚಿಸಲು ಹೊಸ ಮಾರ್ಗಗಳನ್ನು ಹುಡುಕಿ. ಇದರಿಂದ ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು.

