ಮಲ್ಪೆ, ಸೆಪ್ಟೆಂಬರ್ 29:
ಇಲ್ಲಿನ ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕೊಲೆಯಾದ ವ್ಯಕ್ತಿಯನ್ನು ಆಂಧ್ರಪ್ರದೇಶ ಮೂಲದ ಪರಮೇಶ್ ಎಂದು ಗುರುತಿಸಲಾಗಿದೆ.
ಇವರು ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದು, ತಾವು ಪ್ರತಿದಿನ ಮಲಗುತ್ತಿದ್ದ ಜಾಗದಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಮಲ್ಪೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

