ಕಾರ್ಕಳ: ಜೋಡು ರಸ್ತೆಯ ಬಳಿಯ ನೂತನ ಅಪಾರ್ಟ್ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಗಳವಾರ (ಅಕ್ಟೋಬರ್ 06) ಮುಂಜಾನೆ ಬೆಳಕಿಗೆ ಬಂದಿದೆ.
ಮೃತರನ್ನು ಕಾರ್ಕಳದ ಉದ್ಯಮಿ ಮಂಜುನಾಥ್ ಪೈ (51) ಎಂದು ಗುರುತಿಸಲಾಗಿದೆ. ಇವರನ್ನು ಸ್ಥಳೀಯವಾಗಿ ಮಂಜಣ್ಣ ಎಂದೂ ಕರೆಯುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ತೀವ್ರ ಹಣಕಾಸಿನ ಸಮಸ್ಯೆಯೇ ಈ ಕೃತ್ಯಕ್ಕೆ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ.
ಇತ್ತೀಚೆಗಷ್ಟೇ ನಿರ್ಮಾಣಗೊಂಡು ಪೂರ್ಣಗೊಂಡಿರುವ ಅಪಾರ್ಟ್ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಮಂಜುನಾಥ್ ಪೈ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕಾರ್ಕಳ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆಯನ್ನು ಮುಂದುವರಿಸಿದ್ದಾರೆ.

