ಬ್ರಹ್ಮಾವರ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಭಾ.ಕೃ.ಅ.ಪ-ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ ಇವುಗಳ ಸಹಯೋಗದಲ್ಲಿ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ “ಕೃಷಿ ಮತ್ತು ತೋಟಗಾರಿಕೆ ಮೇಳ – 2026” ಅನ್ನು ಆಯೋಜಿಸಲಾಗಿದೆ. ಈ ಬೃಹತ್ ಕಾರ್ಯಕ್ರಮವು ಅಕ್ಟೋಬರ್ 17, 2026 (ಶನಿವಾರ) ಮತ್ತು ಅಕ್ಟೋಬರ್ 18, 2026 (ಭಾನುವಾರ) ರಂದು ಪೂರ್ವಾಹ್ನ 10:30 ಗಂಟೆಗೆ ಪ್ರಾರಂಭವಾಗಲಿದೆ.
ಈ ಮೇಳವನ್ನು ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಜಿಲ್ಲಾ ಕೃಷಿಕ ಸಮಾಜ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಮತ್ತು ಲಕ್ಷ್ಮಿ ಫಾರ್ಮ್ಸ್ & ಫೀಡ್ಸ್ ಮೂಡುಬಿದಿರೆ ಮುಂತಾದ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದೆ. ಕೃಷಿ ಕ್ಷೇತ್ರದ ನೂತನ ತಂತ್ರಜ್ಞಾನಗಳು ಹಾಗೂ ಮಾಹಿತಿಯನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹಾಗೂ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಕೋರಿದ್ದಾರೆ.

