ಶಿವಮೊಗ್ಗ: ರಾಜ್ಯದಲ್ಲಿ ಬಹುದಿನಗಳಿಂದ ಬಾಕಿಯುಳಿದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡಿಸೆಂಬರ್ 2ನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟವಾಗಲಿದ್ದು, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ಸಾಧ್ಯತೆಯಿದೆ ಎಂದು ಸ್ಪಷ್ಟಪಡಿಸಿದರು.
ಚುನಾವಣೆಗೆ ಸಂಬಂಧಿಸಿದಂತೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. 1800 ಆಕ್ಷೇಪಣೆಗಳ ಪರಿಶೀಲನೆ:ಮೀಸಲಾತಿ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19ರ ವರೆಗೆ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಸುಮಾರು 1800 ಆಕ್ಷೇಪಣಾ ಅರ್ಜಿಗಳು ಸ್ವೀಕೃತವಾಗಿವೆ. ಒಂದು ವಾರದ ಒಳಗಾಗಿ ಈ ಎಲ್ಲ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಖಂಡ್ರೆ ವಿವರಿಸಿದರು.

