ಉಡುಪಿ, ಅ. 29: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಘಟನೆಗಳಲ್ಲಿ ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಕೊಡವೂರು ಗ್ರಾಮದ ಮಲ್ಪೆ ಬಂದರಿನಿಂದ ಶ್ರೀವೀರಾಂಜನೇಯ ಪರ್ಸಿಯನ್ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ (28) ಹಾಗೂ ಓಂ ಶ್ರೀದತ್ತ ಮೀನುಗಾರಿಕಾ ಬೋಟ್ನಲ್ಲಿ ತೆರಳಿದ್ದ ಪ್ರಮೋದ್ ಗೌಡ (53) ನಾಪತ್ತೆಯಾದವರು. ಇಬ್ಬರೂ ಪ್ರತ್ಯೇಕ ಪ್ರಕರಣಗಳಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ನಾಪತ್ತೆಯಾದ ಇಬ್ಬರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 0820-2537999, ಪೊಲೀಸ್ ಉಪನಿರೀಕ್ಷಕರ ಮೊಬೈಲ್ ಸಂಖ್ಯೆ 9480805447 ಅಥವಾ ಉಡುಪಿ ವೃತ್ತ ನಿರೀಕ್ಷಕರ ಮೊಬೈಲ್ ಸಂಖ್ಯೆ 9480805430 ಅನ್ನು ಸಂಪರ್ಕಿಸುವಂತೆ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

