ಕುಂದಾಪುರ: ಮಧ್ಯಾವಧಿ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸ್ರೂರು ಗ್ರಾಮದಲ್ಲಿ ಅ.30ರಂದು ನಡೆದಿದೆ.
ಬಸ್ರೂರು ಗ್ರಾಮದ ನಿರೋಣಿಯಲ್ಲಿ ವಾಸವಾಗಿದ್ದ ನೀಶಂ (15) (ಹೆಸರು ಬದಲಿಸಲಾಗಿದೆ )ವಿದ್ಯಾರ್ಥಿನಿ. ಈಕೆ ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇತ್ತೀಚೆಗೆ ನಡೆದ ಮಧ್ಯಾವಧಿ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದಳು ಎನ್ನಲಾಗಿದೆ.
ಅ.30ರಂದು ಶಾಲೆಯಲ್ಲಿ ಪೋಷಕರ ಸಭೆ ಆಯೋಜಿಸಲಾಗಿತ್ತು. ಆದರೆ, ವಿದ್ಯಾರ್ಥಿನಿಯ ತಾಯಿ ಸಭೆಗೆ ಹಾಜರಾಗಲು ನಿರಾಕರಿಸಿದ್ದರು. ಇದರಿಂದ ಮನನೊಂದಿದ್ದ ಫಾತಿಮಾ ಅಕ್ಸಾ ಮನೆಯ ಕೋಣೆಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಳು ಎನ್ನಲಾಗಿದೆ.
ಸ್ವಲ್ಪ ಸಮಯದ ಬಳಿಕ ಮಗಳು ಶಾಲೆಗೆ ತೆರಳದಿರುವುದನ್ನು ಗಮನಿಸಿದ ತಂದೆ ಕೋಣೆಯ ಬಾಗಿಲು ತೆರೆದಾಗ, ಫ್ಯಾನ್ನ ರಾಡಿಗೆ ನೈಲಾನ್ ಶಾಲ್ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣ ಆಕೆಯನ್ನು ಕಾರಿನಲ್ಲಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಪರೀಕ್ಷಿಸಿದ ವೈದ್ಯರು ಬೆಳಿಗ್ಗೆ 9.30ಕ್ಕೆ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಕ್ರಮಾಂಕ 36/2026ರಂತೆ ಬಿಎನ್ಎಸ್ಎಸ್ ಕಲಂ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

