Author: Karavali TV

ಉಡುಪಿಯ ಪ್ರತಿಷ್ಠಿತ ಬಲ್ಲಾಳ್ ಮೊಬೈಲ್ಸ್ (Ballal Mobiles) ಸಂಸ್ಥೆಯು ಗ್ರಾಹಕರಿಗಾಗಿ ಅತ್ಯಕರ್ಷಕ ‘ಮೆಗಾ ಫೆಸ್ಟಿವಲ್ ಆಫರ್ಸ್’ (Mega Festival Offers) ಅನ್ನು ಘೋಷಿಸಿದೆ. “ಹೆಚ್ಚು ಖರೀದಿಸಿ, ಹೆಚ್ಚಿನದನ್ನು ಗೆಲ್ಲಿರಿ” (Shop More, Win More!) ಎಂಬ ಆಕರ್ಷಕ ಘೋಷವಾಕ್ಯದೊಂದಿಗೆ ಈ ಹಬ್ಬದ ವಿಶೇಷ ಕೊಡುಗೆಗಳನ್ನು ಪರಿಚಯಿಸಲಾಗಿದೆ. ಅಕ್ಟೋಬರ್ 10 ರಿಂದ ಜನವರಿ 14ರವರೆಗೆ ಈ ಕೊಡುಗೆಯು ಚಾಲ್ತಿಯಲ್ಲಿರಲಿದ್ದು, ಹಬ್ಬದ ಸಂಭ್ರಮದಲ್ಲಿರುವ ಗ್ರಾಹಕರಿಗೆ ಭರ್ಜರಿ ಉಡುಗೊರೆಗಳನ್ನು ಗೆಲ್ಲುವ ಸುವರ್ಣ ಅವಕಾಶವನ್ನು ಕಲ್ಪಿಸಲಾಗಿದೆ.…

Read More

ಹಿರಿಯಡ್ಕ: ಹರಿಖಂಡಿಗೆ ಕಡೆಯಿಂದ ಹಿರಿಯಡ್ಕ ಕಡೆಗೆ ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಅಬ್ದುಲ್ ಸತ್ತಾರ್ ಹಾಗೂ ಯೋಗೀಶ ನಾಯ್ಕ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಅಕ್ರಮ ಜಾನುವಾರು ಸಾಗಾಟದ ಕುರಿತು ಸಾರ್ವಜನಿಕರಿಂದ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಹಿರಿಯಡ್ಕ ಪೊಲೀಸ್ ಠಾಣೆಯ ಸಿಬ್ಬಂದಿಯವರು ಠಾಣೆಯ ಎದುರಿನ ಜಂಕ್ಷನ್ ಬಳಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಹರಿಖಂಡಿಗೆ ಕಡೆಯಿಂದ…

Read More

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಗ್ರಾಮದ ರಿಕ್ಷಾ ನಿಲ್ದಾಣದ ಬಳಿ ಅತಿವೇಗವಾಗಿ ಬಂದ ಮೋಟಾರ್ ಸೈಕಲ್ ಡಿಕ್ಕ ಹೊಡೆದು ತೀವ್ರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.ಮೃತರನ್ನು ಉಪ್ಪೂರು ಗ್ರಾಮದ ಹರ್ಮನ್ ಡಿಸೋಜಾ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಸುಮಾರು 7:45 ರ ವೇಳೆಗೆ ಹರ್ಮನ್ ಡಿಸೋಜಾ ಅವರು ಹೆದ್ದಾರಿಯ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬ್ರಹ್ಮಾವರ ಕಡೆಯಿಂದ…

Read More

ಮೇಷ ವೃತ್ತಿ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಸ್ನೇಹಿತರೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ನಿಮ್ಮ ಆಲೋಚನೆಗಳು ಫಲ ನೀಡುತ್ತವೆ. ನಿಮ್ಮ ಕೆಲಸಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಸ್ಪರ್ಧೆಯನ್ನು ತಡೆದುಕೊಂಡು ನೀವು ಒಪ್ಪಂದಗಳನ್ನು ಗೆಲ್ಲುತ್ತೀರಿ. ನೀವು ದೇವಾಲಯಗಳಿಗೆ ಭೇಟಿ ನೀಡುತ್ತೀರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ ಮತ್ತು ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ. ರಾಜಕೀಯ ಮತ್ತು ಕೈಗಾರಿಕಾ ವಲಯಗಳಿಗೆ ವಿದೇಶಿ ಆಹ್ವಾನಗಳು. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಅವಕಾಶಗಳು ಬರುತ್ತವೆ. ಮಹಿಳೆಯರಿಗೆ…

Read More

ಸ್ಥಳೀಯ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನ ಆಡಿಟೋರಿಯಂನಲ್ಲಿ ಶುಕ್ರವಾರ, ಅಕ್ಟೋಬರ್ 9 ರಂದು ‘ಐಡಿಯಾಸ್ ಟುಡೇ, ಇಂಪ್ಯಾಕ್ಟ್ ಟುಮಾರೋ’ ಎಂಬ ಧ್ಯೇಯವಾಕ್ಯದೊಂದಿಗೆ ‘MITK AI VISION 24H’ 24-ಗಂಟೆಗಳ ರಾಷ್ಟ್ರಮಟ್ಟದ ಹ್ಯಾಕಥಾನ್ ಉದ್ಘಾಟನಾ ಸಮಾರಂಭವು ಅದ್ಧೂರಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ಕಾಮ್ವಾಲ್ಟ್ ಸಂಸ್ಥೆಯ ಡಾಟಾ ಇವಾಂಜೆಲಿಸ್ಟ್ ಪ್ರಶಾಂತ್ ಜಯರಾಮ್ ಉದ್ಘಾಟಿಸಿ ಮಾತನಾಡುತ್ತಾ, “ಪ್ರಸ್ತುತ ಕೈಗಾರಿಕಾ ಕ್ಷೇತ್ರದಲ್ಲಿ ದತ್ತಾಂಶ ಮತ್ತು ಕೃತಕ ಬುದ್ಧಿಮತ್ತೆ ಕ್ರಾಂತಿಕಾರಿ ಬದಲಾವಣೆ ತರುತ್ತಿವೆ.…

Read More

ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಅರ್ಹತೆ ಮತ್ತು ದಾಖಲೆಗಳನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ರಾಜ್ಯದ ಸುಮಾರು 1.26 ಕೋಟಿ ಫಲಾನುಭವಿ ಮಹಿಳೆಯರ ವಿವರಗಳನ್ನು ಶೀಘ್ರದಲ್ಲೇ ಪುನಃ ಪರಿಶೀಲಿಸಲಿದ್ದು, ಇದಕ್ಕಾಗಿ ಪ್ರತ್ಯೇಕ ಮರುಪರಿಶೀಲನಾ ಅರ್ಜಿಯನ್ನು ಸರ್ಕಾರ ಅಂತಿಮಗೊಳಿಸಿದೆ. ಈ ಪ್ರಕ್ರಿಯೆಯು ಹೊಸ ಫಲಾನುಭವಿಗಳ ಸೇರ್ಪಡೆಗಾಗಿ ಅಲ್ಲದೆ, ಈಗಾಗಲೇ ಮಾಸಿಕ ಸಹಾಯಧನ ಪಡೆಯುತ್ತಿರುವವರ ಅರ್ಹತೆಯನ್ನು ಖಾತರಿಪಡಿಸಿಕೊಳ್ಳಲು ನಡೆಯುತ್ತಿದೆ. ಮನೆ-ಮನೆಗೆ ಭೇಟಿ…

Read More

ಮಂಗಳೂರು, ಅಕ್ಟೋಬರ್ 9: ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಾಗಿ ಸ್ವಂತ ತಂದೆಯನ್ನೇ ಮಗಳು ತನ್ನ ಬಾಯ್‌ಫ್ರೆಂಡ್ ಜೊತೆ ಸೇರಿ ದಾರುಣವಾಗಿ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಶಂಕೆ ಮಂಗಳೂರಿನಲ್ಲಿ ವ್ಯಕ್ತವಾಗಿದೆ. ನಗರದ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (ಜುಲೈ 19 ರಂದು ನಿಗೂಢವಾಗಿ ಮೃತಪಟ್ಟವರು) ಅವರ ಶವವನ್ನು ದಫನ ಮಾಡಿದ ಬರೋಬ್ಬರಿ ಎರಡು ತಿಂಗಳ ಬಳಿಕ ಸಮಾಧಿಯಿಂದ ಹೊರತೆಗೆಯಲಾಗಿದ್ದು, ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ತನಿಖೆ…

Read More

ಮಂಗಳೂರು: ನಿಷೇಧಿತ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಂಗಳೂರು ನಗರಕ್ಕೆ ಸಾಗಿಸಿ, ಮಂಗಳೂರು ನಗರ ಹಾಗೂ ಕೇರಳದ ವಿವಿಧೆಡೆ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ನಗರ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಬೈದಲ ನಿವಾಸಿ ಅಬ್ದುಲ್ ಹಾಫಿಲ್…

Read More

ಉಡುಪಿ: ಉಡುಪಿ ಜಿಲ್ಲೆಯ ಮಹತ್ವದ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ ಉಡುಪಿ ದಸರಾ–2026 ಅಕ್ಟೋಬರ್ 11ರಿಂದ 21ರವರೆಗೆ ಅದ್ದೂರಿಯಾಗಿ ನಡೆಯಲಿದೆ. ಉಡುಪಿ ದಸರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಉಡುಪಿ ದಸರಾ ಮಹೋತ್ಸವದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ತಿಳಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ದಸರಾ ಮಹೋತ್ಸವದ ಮೂಲಕ ಜಿಲ್ಲೆಯ ಧಾರ್ಮಿಕ ಹಾಗೂ ಸಾಂಸ್ಕೃತಿಕ…

Read More

ಬೆಂಗಳೂರು: ಬೇಸಿಗೆ ಹಾಗೂ ಚಳಿಗಾಲವೆನ್ನದೆ ವರ್ಷವಿಡೀ ನೆಚ್ಚಿನ ತಂಪಿನ ಸವಿಯಾದ ಐಸ್‌ಕ್ರೀಂ ಪ್ರಿಯರಿಗೆ ಆತಂಕ ತರುವಂತಹ ಸಂಗತಿಯೊಂದು ಬೆಳಕಿಗೆ ಬಂದಿದೆ. ರಾಜ್ಯದ ವಿವಿಧೆಡೆ ಕಾರ್ಯಾಚರಿಸುತ್ತಿರುವ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಹಲವು ಕಡೆಗಳಲ್ಲಿ ಅವಧಿ ಮೀರಿದ ಹಾಗೂ ಅಸಮರ್ಪಕ ಲೇಬಲಿಂಗ್ ಹೊಂದಿರುವ ಆಹಾರ ಪದಾರ್ಥಗಳನ್ನು ಜಪ್ತಿ ಮಾಡಿದ್ದಾರೆ. ಆರೋಗ್ಯ ಸಚಿವರ ನೇರ ಸೂಚನೆಯ ಬೆನ್ನಲ್ಲೇ…

Read More