ಮಂಗಳೂರು: ಇಲ್ಲಿನ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಸಂಭವಿಸಿದ ಭಾರಿ ಪ್ರಮಾಣದ ಸ್ಫೋಟದಲ್ಲಿ ಓರ್ವ ಸಿಬ್ಬಂದಿ ದಾರುಣವಾಗಿ ಮೃತಪಟ್ಟಿದ್ದು, ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮನೀಶ್ (30) ಎಂಬುವರ ಮೃತದೇಹ ಪತ್ತೆಯಾಗಿದೆ. ದುರಂತ ಸಂಭವಿಸಿದ ಆರಂಭಿಕ ಹಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಕೇವಲ ಕೆಲವರಿಗೆ ಗಾಯಗಳಾಗಿವೆ ಎಂದಷ್ಟೇ ವರದಿಯಾಗಿತ್ತು. ಆದರೆ, ಸ್ಥಳದಲ್ಲಿ ಬೆಂಕಿ ನಂದಿಸಿ ಪರಿಶೀಲನೆ ನಡೆಸಿದಾಗ ಮನೀಶ್…
Author: Karavali TV
ಉಡುಪಿ: ಜಿಲ್ಲೆಯ ಆಕಾಶದಲ್ಲಿ ಬುಧವಾರ ಮಧ್ಯಾಹ್ನ ಸೂರ್ಯನ ಸುತ್ತ ವೃತ್ತಾಕಾರದ ಪ್ರಕಾಶಮಾನ ವಲಯವೊಂದು ಗೋಚರಿಸಿ ಸಾರ್ವಜನಿಕರ ಗಮನ ಸೆಳೆಯಿತು. ಸೂರ್ಯನ ಸುತ್ತ ದೊಡ್ಡ ವೃತ್ತದಂತೆ ಕಾಣಿಸಿಕೊಂಡ ಈ ಅಪರೂಪದ ದೃಶ್ಯ ಕೆಲಕಾಲ ಆಕಾಶದಲ್ಲಿ ಸ್ಪಷ್ಟವಾಗಿ ಗೋಚರಿಸಿತು. ಸೂರ್ಯನ ಸುತ್ತ ಕಾಣಿಸಿಕೊಳ್ಳುವ ಈ ವೃತ್ತಾಕಾರದ ಬೆಳಕಿನ ವಲಯವನ್ನು ‘ಸನ್ ಹ್ಯಾಲೋ’ (Sun Halo) ಎಂದು ಕರೆಯಲಾಗುತ್ತದೆ. ವಾತಾವರಣದ ಮೇಲ್ಭಾಗದಲ್ಲಿರುವ ಸಣ್ಣ ಹಿಮದ ಸ್ಫಟಿಕಗಳ ಮೂಲಕ ಸೂರ್ಯನ ಬೆಳಕು ವಕ್ರೀಭವನಗೊಂಡಾಗ ಇಂತಹ ಪ್ರಕಾಶಮಾನ…
ನವದೆಹಲಿ, ಸೆಪ್ಟೆಂಬರ್ 30: ಯುಪಿಐ ಪಾವತಿಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿ ದೇಶದ ಮೊಬೈಲ್ ಹಾಗೂ ರೀಟೇಲ್ ವರ್ತಕರು ಅಕ್ಟೋಬರ್ 2ರಂದು ‘ನೋ ಯುಪಿಐ ಡೇ’ ಆಚರಿಸಲು ಕರೆ ನೀಡಿದ್ದಾರೆ. ಮೊಬೈಲ್ ರೀಟೇಲ್ ಮಾರಾಟಗಾರರ ಸಂಸ್ಥೆ (AIMRA) ನೀಡಿರುವ ಈ ಕರೆಗೆ ಗ್ರಾಹಕ ಉತ್ಪನ್ನ ವಿತರಕರ ಒಕ್ಕೂಟ (AICPDF) ಕೂಡ ಬೆಂಬಲ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು…
ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG)ಯನ್ನು ಪ್ರಸ್ತುತ ಇರುವ ಪೆನ್-ಪೇಪರ್ ಮಾದರಿಯಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಗೆ ಬದಲಾಯಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಅಗತ್ಯವಿರುವ ಆನ್‌ಲೈನ್ ಪರೀಕ್ಷಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಪರೀಕ್ಷಾ ಕೇಂದ್ರಗಳ ಲಭ್ಯತೆಯ ವ್ಯತ್ಯಾಸವನ್ನು ಕಡಿಮೆ ಮಾಡುವುದು ಹಾಗೂ ಎಲ್ಲ…
ಸೃಜನಶೀಲತೆ, ಡಿಸೈನ್ ಮತ್ತು ಡಿಜಿಟಲ್ ಕಂಟೆಂಟ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಉತ್ತಮ ಉದ್ಯೋಗಾವಕಾಶವೊಂದು ಲಭ್ಯವಾಗಿದೆ. ಗ್ರಾಫಿಕ್ ಡಿಸೈನ್ ಹಾಗೂ ವೀಡಿಯೋ ಎಡಿಟಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಪ್ರತಿಭಾವಂತ ಅಭ್ಯರ್ಥಿಗಳಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಖಾಲಿ ಹುದ್ದೆಗಳು 1. ಗ್ರಾಫಿಕ್ ಡಿಸೈನರ್ (Graphic Designer)ಡಿಜಿಟಲ್ ಹಾಗೂ ಸಾಮಾಜಿಕ ಜಾಲತಾಣಗಳಿಗಾಗಿ ಆಕರ್ಷಕ ಪೋಸ್ಟರ್‌ಗಳು, ಕ್ರಿಯೇಟಿವ್‌ಗಳು, ಬ್ಯಾನರ್‌ಗಳು, ಥಂಬ್‌ನೈಲ್‌ಗಳು ಸೇರಿದಂತೆ ವಿವಿಧ ದೃಶ್ಯಾತ್ಮಕ ವಿನ್ಯಾಸಗಳನ್ನು ಸಿದ್ಧಪಡಿಸುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶವಿದೆ. 2.…
ಮಂಗಳೂರು: ನಗರದ ಎಂಆರ್‌ಪಿಎಲ್ (ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಹಲವು ಮನೆಗಳು ಕಂಪಿಸಿದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆಲವು ಮನೆಗಳ ಬಾಗಿಲು ಹಾಗೂ ಕಿಟಕಿಗಳಿಗೆ ಹಾನಿಯಾಗಿರುವುದಾಗಿ ವರದಿಯಾಗಿದೆ. ಸ್ಫೋಟದ ಬಳಿಕ ಘಟನಾ ಸ್ಥಳದಿಂದ ದಟ್ಟ ಹೊಗೆ ಆಕಾಶದಲ್ಲಿ ಆವರಿಸಿಕೊಂಡಿದ್ದು, ಸುತ್ತಮುತ್ತಲಿನ ಹಾಗೂ ದೂರದ…
ಬೆಂಗಳೂರು: ಸಂಸ್ಕರಿಸಿದ ಅಡುಗೆ ಎಣ್ಣೆಯ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಪ್ರಮುಖವಾಗಿ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಕಾಯಿಸಿ ಬಳಕೆ ಮಾಡಬಾರದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಬಳಸಿದ ಎಣ್ಣೆಯನ್ನು ಎರಡನೇ ಬಾರಿ ಮರುಬಳಕೆ ಮಾಡುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಕಾಯಿಸಿ ಬಳಸುವುದರಿಂದ ಅದರಲ್ಲಿ ಹಲವು ರಾಸಾಯನಿಕ ಬದಲಾವಣೆಗಳು ಉಂಟಾಗುವ…
ಬೆಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆ ಕುರಿತು ಪರಿಶೀಲನೆ ನಡೆಸಲು ಮೂವರು ಹೈಕೋರ್ಟ್ ನ್ಯಾಯಮೂರ್ತಿಗಳನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಅಧಿಸೂಚನೆ ಹೊರಡಿಸಿದ್ದಾರೆ. ಹಿರಿಯ ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್…
ಕಾರ್ಕಳ: ಹೊಸ ಮನೆ ನಿರ್ಮಾಣದ ವಿಚಾರವಾಗಿ ತಂದೆ-ಮಗನ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ, ತಂದೆಯೇ ಮಗನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರ್‌ನಲ್ಲಿ ನಡೆದಿದೆ. ಕೇರಳ ಮೂಲದ ತ್ರೆಸಿಯಾಮ್ ಎಂಬವರು ತಮ್ಮ ಮನೆಯ ಸಮೀಪ ಹೊಸ ಮನೆಯನ್ನು ನಿರ್ಮಿಸುತ್ತಿದ್ದರು. ಈ ಮನೆ ತನಗೆ ಬಿಟ್ಟುಕೊಡಬೇಕು ಎಂದು ಅವರ ಪುತ್ರ ಚಾರ್ಲ್ಸ್ ಒತ್ತಾಯಿಸುತ್ತಿದ್ದು, ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ.…
ನವದೆಹಲಿ: 18 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಸ್ವತಂತ್ರವಾಗಿ ಖಾತೆ ತೆರೆಯುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಗೆ ಅವಕಾಶ ನೀಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನ್ಯಾಯಪೀಠ, ಈ ಕುರಿತು ಶೀಘ್ರವೇ ಕಠಿಣ ಕಾನೂನು ರೂಪಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಡಿಜಿಟಲ್ ವೇದಿಕೆಗಳ ಬಳಕೆಯಿಂದ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ…
