ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 3 ರಿಂದ ಅಕ್ಟೋಬರ್ 21 ರವರೆಗೆ ಒಟ್ಟು 19 ದಿನಗಳ ಕಾಲ ದಸರಾ ರಜೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಈ ವರ್ಷ ಒಟ್ಟು 119 ಸಾರ್ವಜನಿಕ ಹಾಗೂ ಸಾಂದರ್ಭಿಕ ರಜೆಗಳಿದ್ದು, 245 ದಿನಗಳನ್ನು ಶಾಲಾ ಕರ್ತವ್ಯದ ದಿನಗಳನ್ನಾಗಿ ನಿಗದಿಪಡಿಸಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇರುವುದರಿಂದ ಅಂದಿನಿಂದಲೇ ವಿದ್ಯಾರ್ಥಿಗಳಿಗೆ ನಿತ್ಯದ…
Author: Karavali TV
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಳಿ ಇರುವ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಣ ಹಾಗೂ ದುಬಾರಿ ವಸ್ತುಗಳನ್ನು ವೀಡಿಯೊ ಮಾಡಿ ಪ್ರದರ್ಶಿಸುವ ಚಟುವಟಿಕೆಗಳು ಹೆಚ್ಚಾಗುತ್ತಿವೆ. ತಮ್ಮಲ್ಲಿರುವ ಸಂಪತ್ತನ್ನು ಸಾರ್ವಜನಿಕವಾಗಿ ತೋರಿಸಿಕೊಳ್ಳುವ ಈ ಟ್ರೆಂಡ್ ಇದೀಗ ಪ್ರಸಿದ್ಧ ಯೂಟ್ಯೂಬರ್ ಕುಟುಂಬವೊಂದಕ್ಕೆ ಭಾರಿ ಬೆಲೆಯಾಗಿ ಪರಿಣಮಿಸಿದೆ. ಮನೆಯಲ್ಲಿದ್ದ ಆಭರಣ ಹಾಗೂ ಹಣದ ಪ್ರತಿಯೊಂದು ವಿವರವನ್ನೂ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಮಹಿಳೆಯ ಮನೆಯಲ್ಲೇ ಇದೀಗ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು…
ಬೆಂಗಳೂರು: ಊಟ ಮಾಡಿದ ತಕ್ಷಣ ಮಲಗುವುದು, ಸ್ನಾನ ಮಾಡುವುದು ಅಥವಾ ಕಠಿಣ ವ್ಯಾಯಾಮಕ್ಕೆ ಮುಂದಾಗುವುದು ಹಲವರ ದಿನಚರಿಯಲ್ಲಿರುವ ಸಾಮಾನ್ಯ ಅಭ್ಯಾಸ. ಆದರೆ ಆಹಾರ ಸೇವಿಸಿದ ಬಳಿಕ ದೇಹಕ್ಕೆ ಜೀರ್ಣಕ್ರಿಯೆಗಾಗಿ ಸ್ವಲ್ಪ ಸಮಯ ನೀಡುವುದು ಅಗತ್ಯ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಊಟದ ನಂತರ ತಕ್ಷಣವೇ ಕೆಲವು ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಕೆಲವರಿಗೆ ಹೊಟ್ಟೆಯ ಅಸ್ವಸ್ಥತೆ ಸೇರಿದಂತೆ ವಿವಿಧ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಆಹಾರ ಸೇವಿಸುವುದು ಮಾತ್ರವಲ್ಲದೆ, ಅದನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸೂಕ್ತ…
ನವದೆಹಲಿ: ಮಕ್ಕಳಿಗೆ ನೆಗಡಿ, ಕೆಮ್ಮು ಅಥವಾ ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಸಲಹೆ ಪಡೆಯದೆ ನೇರವಾಗಿ ಕೆಮ್ಮಿನ ಸಿರಪ್ ನೀಡುವ ಪೋಷಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ವಿಶೇಷವಾಗಿ ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಲವು ಕೆಮ್ಮಿನ ಸಿರಪ್‌ಗಳನ್ನು ನೀಡುವುದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಔಷಧ ನಿಯಂತ್ರಣ ಪ್ರಾಧಿಕಾರ ಎಚ್ಚರಿಸಿದೆ. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಔಷಧ ನಿಯಮಗಳು, 1945ಕ್ಕೆ ತಿದ್ದುಪಡಿ ತರಲು ಮುಂದಾಗಿದೆ.…
ಕುಂದಾಪುರ: ಕಳೆದ 18 ವರ್ಷಗಳಿಂದ ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕಟ್‌ಬೆಲ್ತೂರು ನಿವಾಸಿ ರಾಘವೇಂದ್ರ ಜೋಗಿ (48) ಅವರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಟ್‌ಬೆಲ್ತೂರಿನಲ್ಲಿ ಹೆಂಡತಿ ಹಾಗೂ ಮಗಳೊಂದಿಗೆ ವಾಸಿಸುತ್ತಿದ್ದ ರಾಘವೇಂದ್ರ ಜೋಗಿಯವರು ದಿನಾಂಕ 24/09/2026 ರಂದು ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಗಮನಕ್ಕೆ ಬಂದ ತಕ್ಷಣ, ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ಕುಂದಾಪುರದ ಆದರ್ಶ…
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ, ಖ್ಯಾತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರು ರೈಲು ಪ್ರಯಾಣದ ವೇಳೆ ತಮಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕ ಪ್ರಜ್ಞೆ ಹಾಗೂ ಇತರ ಪ್ರಯಾಣಿಕರ ನೆಮ್ಮದಿಗೆ ಗೌರವ ನೀಡುವ ಅಗತ್ಯದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಶ್ರೀ ಅವರ ಪ್ರಕಾರ, ರೈಲಿನ 56 ಆಸನಗಳ ಬೋಗಿಯಲ್ಲಿ ಸುಮಾರು…
ಉಡುಪಿ (ಸೆ.25): ಯುಎಇಯ ಶಾರ್ಜಾದಲ್ಲಿ ಬರ್ಬರವಾಗಿ ಕೊಲೆಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಅಲ್ವಿನ್ ಪ್ರಕಾಶ್ ಕುಂದರ್ ಅವರ ಮೃತದೇಹ ಕೊನೆಗೂ ಉಡುಪಿಗೆ ತಲುಪಿದೆ.ಕಳೆದ ಎರಡು ತಿಂಗಳ ಹಿಂದೆ ನಡೆದಿದ್ದ ಈ ದಾರುಣ ಹತ್ಯೆಯ ಬಳಿಕ, ಇಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಮೃತದೇಹವನ್ನು ಕುಂದಾಪುರಕ್ಕೆ ತರಲಾಗಿದ್ದು, ಕಿರಿಯ ಸಹೋದರನ ಶವ ಕಂಡು ಅಣ್ಣ ಸೇರಿದಂತೆ ಇಡೀ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಏನಿದು ಭೀಕರ ಪ್ರಕರಣ? ಹಲವು ವರ್ಷಗಳಿಂದ ಶಾರ್ಜಾ ವಿಮಾನ…
ಉಡುಪಿ: ದೆಂದೂರುಕಟ್ಟೆ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಬಸ್‌ನ ಬಹುತೇಕ ಭಾಗ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಮೇಷಮೇಷ ರಾಶಿಯವರಿಗೆ ಇಂದು ವೃತ್ತಿಜೀವನದಲ್ಲಿ ನೀವು ಕೈಗೊಳ್ಳುವ ಪ್ರಯತ್ನಗಳಿಗೆ ಉತ್ತಮ ಫಲ ದೊರೆಯುವ ಸಾಧ್ಯತೆಯಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲವೂ ಸಿಗಬಹುದು. ಆದರೆ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಮಾತಿನಲ್ಲಿ ಸಂಯಮ ಕಾಯ್ದುಕೊಳ್ಳಿ ಮತ್ತು ಅನಗತ್ಯ ವಿವಾದಗಳಿಂದ ದೂರವಿರಿ. ಕೆಲಸದ ಒತ್ತಡದ ನಡುವೆಯೂ ಕುಟುಂಬಕ್ಕೆ ಸಮಯ ನೀಡಲು ಪ್ರಯತ್ನಿಸಿ. ನಿಮ್ಮ ವಿರುದ್ಧ ನಿಲ್ಲುವವರ ಮೇಲೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ವೃಷಭವೃಷಭ ರಾಶಿಯವರಿಗೆ ಇಂದು ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಹೊಂದಾಣಿಕೆ ಮುಂದುವರಿಯಬಹುದು.…
ಬೆಂಗಳೂರು: ದೇಶಾದ್ಯಂತ ತೀವ್ರ ಕುತೂಹಲ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ (Cr No. 250/2012, IPC 376, 302) ಸಮಗ್ರ ಮರು ತನಿಖೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಬಿಐ ಎಸ್‌ಸಿಬಿ ಚೆನ್ನೈ ಮರು ನೋಂದಾಯಿಸಿದ್ದ FIR ಆಧಾರದ ಮೇಲೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (SIT) ರಚಿಸಿ…
