Author: Karavali TV

ನಾವು ದಿನನಿತ್ಯ ಬಳಕೆ ಮಾಡುವ ಹಾಲಿನ ಪ್ಯಾಕೆಟ್‌ಗಳು ಕಿತ್ತಳೆ, ಹಸಿರು, ನೀಲಿ ಹಾಗೂ ಗುಲಾಬಿ ಹೀಗೆ ವಿವಿಧ ಬಣ್ಣಗಳಲ್ಲಿ ಇರುವುದನ್ನು ಕಾಣಬಹುದು. ಬಹುತೇಕ ಗ್ರಾಹಕರು ಇದನ್ನು ಕೇವಲ ಆಕರ್ಷಕ ವಿನ್ಯಾಸ ಅಥವಾ ಸಾಮಾನ್ಯ ಪ್ಯಾಕಿಂಗ್‌ನ ಭಾಗವೆಂದು ಭಾವಿಸುತ್ತಾರೆ. ಆದರೆ, ಈ ಪ್ರತಿಯೊಂದು ಬಣ್ಣಗಳ ಆಯ್ಕೆಯ ಹಿಂದೆ ವೈಜ್ಞಾನಿಕ ಹಾಗೂ ತಾಂತ್ರಿಕ ಕಾರಣಗಳಿದ್ದು, ಹಾಲಿನಲ್ಲಿರುವ ಕೊಬ್ಬಿನಂಶದ (ಫ್ಯಾಟ್) ಪ್ರಮಾಣವನ್ನು ಸುಲಭವಾಗಿ ಗುರುತಿಸಲು ಕಂಪನಿಗಳು ಈ ವರ್ಣ ಸಂಕೇತಗಳನ್ನು (Color Codes) ಬಳಸುತ್ತವೆ.…

Read More

ಪುತ್ತೂರು: ಯಕ್ಷಗಾನ ಕಲಾವಿದರ ಕುರಿತು ಅವಾಚ್ಯ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಸೆ.21ರ ರಾತ್ರಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಯಕ್ಷಗಾನ ಕಲಾವಿದರೊಬ್ಬರಿಗೆ ದೂರವಾಣಿ ಕರೆ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ಭಾಗವಾಗಿ ಠಾಣೆಗೆ ಹಾಜರಾದ ತಿಮರೋಡಿ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದು,…

Read More

ಮಂಗಳೂರು: ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಚೀಟಿಂಗ್ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಒಟ್ಟು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಾಲಕೃಷ್ಣ, ಅದರ ಮೊದಲ ಕಂತಾಗಿ ₹5 ಸಾವಿರ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಹಣ ಸ್ವೀಕರಿಸುತ್ತಿದ್ದಾಗಲೇ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ಲೋಕಾಯುಕ್ತ…

Read More

ಮೇಷ​ಮೇಷ ರಾಶಿಯವರಿಗೆ ಇಂದು ಆಧ್ಯಾತ್ಮಿಕ ಚಿಂತನೆ ಮತ್ತು ಧಾರ್ಮಿಕ ಚಟುವಟಿಕೆಗಳತ್ತ ವಿಶೇಷ ಆಸಕ್ತಿ ಮೂಡಬಹುದು. ದೇವರ ಆರಾಧನೆ, ಧಾರ್ಮಿಕ ವಿಧಿವಿಧಾನಗಳು ಅಥವಾ ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಬಹುದು. ನೀವು ಮಾಡುವ ಸತ್ಕಾರ್ಯಗಳು ನಿಮ್ಮ ಗೌರವವನ್ನು ಹೆಚ್ಚಿಸುವುದರ ಜೊತೆಗೆ ಕುಟುಂಬದ ಕೀರ್ತಿಗೂ ಕಾರಣವಾಗಬಹುದು. ಯಾವುದೇ ಪ್ರಮುಖ ವಿಚಾರದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ನಿಮ್ಮ ಸಾಮರ್ಥ್ಯ ಇಂದು ನಿಮಗೆ ನೆರವಾಗಲಿದೆ. ಸಂಜೆಯಿಂದ ಮಧ್ಯರಾತ್ರಿಯವರೆಗೆ ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಶೀತ, ನೆಗಡಿ ಅಥವಾ ಚಳಿಗೆ…

Read More

ಕರಾವಳಿಯ ಹೆಸರಾಂತ ಜಾಹಿರಾತು ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳ ವಿವರ ಕನಿಷ್ಠ ಒಂದು ವರ್ಷ ಕೆಲಸದ ಅನುಭವ ಹೊಂದಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ – 9741569989

Read More

ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸರಗೂರು ತಾಲೂಕಿನ ದೊಡ್ಡಬರಗಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 60 ವರ್ಷದ ವೀರಭದ್ರೆಗೌಡ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ದಾರಿಯಲ್ಲಿ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವೀರಭದ್ರೆಗೌಡ ಮೃತಪಟ್ಟಿದ್ದಾರೆ. ಘಟನೆ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು,…

Read More

ಕೋಟಿ ಕೋಟಿ ಸಿನಿಪ್ರಿಯರ ಮನ ಗೆದ್ದ ‘ಕಾಂತಾರ’ ಸಿನಿಮಾದ ಹಿಂದಿರುವ ಬಹುದೊಡ್ಡ ರಹಸ್ಯವೊಂದು ಈಗ ಕೊನೆಗೂ ಹೊರಬಿದ್ದಿದೆ! ಕರಾವಳಿ ಭಾಗದ ಕುಂದಾಪುರದ ಪ್ರಸಿದ್ಧ ‘ಯುವ ಮೆರಿಡಿಯನ್‌ ಹೋಟೆಲ್‌’ ಈಗ ಅಧಿಕೃತವಾಗಿ ಫಿಲ್ಮ್‌ ಸಿಟಿಯಾಗಿ ರೂಪುಗೊಂಡಿದ್ದು, ‘ಕಾಂತಾರ’ ಹಾಗೂ ‘ಕಾಂತಾರ: ಚಾಪ್ಟರ್‌ 1’ ಚಿತ್ರಗಳ ಪ್ರಮುಖ ಭಾಗಗಳು ಇಲ್ಲೇ ಚಿತ್ರೀಕರಣಗೊಂಡಿವೆ ಎಂಬ ವಿಸ್ಮಯಕಾರಿ ವಿಚಾರವನ್ನು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಬಹಿರಂಗಪಡಿಸಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ರಿಷಬ್‌…

Read More

ಉಪ್ಪಿನಂಗಡಿ: ಪೆರ್ನೆಯ ಮೈರಕಟ್ಟೆಯಲ್ಲಿ ಇಬ್ಬರು ಮಕ್ಕಳನ್ನು ಬಾವಿಗೆಸೆದು, ಓರ್ವ ಮಗುವಿನ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಬಂಧಿತಳಾಗಿರುವ ನೂರುನ್ನಿಸಾಗೆ ಪುತ್ತೂರು ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ನೂರುನ್ನಿಸಾ ತನ್ನ ಸುಮಾರು ಮೂರುವರೆ ವರ್ಷದ ಹೆಣ್ಣು ಮಗು ಹಾಗೂ ಪತಿಯ ತಂಗಿಯ ಮೂರು ವರ್ಷದ ಗಂಡು ಮಗುವನ್ನು ಬಾವಿಗೆ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ. ಸ್ಥಳೀಯರು ಕೂಡಲೇ ಮಕ್ಕಳನ್ನು ಬಾವಿಯಿಂದ ಮೇಲಕ್ಕೆತ್ತಿದರೂ, ರಬೀಜ್ ಎಂಬ ಬಾಲಕ ಮೃತಪಟ್ಟಿದ್ದಾನೆ.…

Read More

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವನ್ನು ಹೊಸದಾಗಿ ಮರು ತನಿಖೆ ನಡೆಸುವಂತೆ ಸೂಚಿಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ ತನಿಖೆ ನಡೆಸಿದ ಅಧಿಕಾರಿಗಳನ್ನು ಹೊಸ ತನಿಖಾ ತಂಡದಲ್ಲಿ ಸೇರಿಸದಂತೆ ನಿರ್ದೇಶನ ನೀಡಿದೆ. ತನಿಖೆ ಪೂರ್ಣಗೊಳಿಸಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆಯೂ ಸೂಚಿಸಿದೆ. 2012ರಲ್ಲಿ ನಡೆದ ಪ್ರಕರಣದಲ್ಲಿ ಆರೋಪಿ ಎಂದು ಬಂಧಿಸಲ್ಪಟ್ಟಿದ್ದ ಸಂತೋಷ್ ರಾವ್ ಅವರನ್ನು 2023ರಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ…

Read More

ಬೆಂಗಳೂರು: ‘ಬಿಗ್‌ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿ ಮಲ್ಲಮ್ಮ ಅವರ ಪಾಲಿನ ಆಶಾಕಿರಣವಾಗಿದ್ದ, ಖ್ಯಾತ ಫ್ಯಾಷನ್ ಡಿಸೈನರ್ ಹಾಗೂ ‘ರಿಷಿ ಡಿಸೈನ್’ ಸಂಸ್ಥೆಯ ಒಡತಿ ಪಲ್ಲವಿ ಲಕ್ಷ್ಮಿಕಾಂತ್ ಅವರು ಹಠಾತ್ತನೆ ನಿಧನರಾಗಿದ್ದಾರೆ. ಅವರ ಅಕಾಲಿಕ ಅಗಲಿಕೆಗೆ ಕಿರುತೆರೆ, ಸ್ಯಾಂಡಲ್‌ವುಡ್ ಹಾಗೂ ಫ್ಯಾಷನ್ ಲೋಕದ ಗಣ್ಯರು ತೀವ್ರ ಕಂಬನಿ ಮಿಡಿದಿದ್ದಾರೆ. ಕಷ್ಟದಲ್ಲಿದ್ದ ಮಲ್ಲಮ್ಮಗೆ ಆಸರೆಯಾಗಿದ್ದ ಪಲ್ಲವಿ ಉತ್ತರ ಕರ್ನಾಟಕದಿಂದ ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದಿದ್ದ ಮಲ್ಲಮ್ಮ ಅವರಿಗೆ ಪಲ್ಲವಿ ಲಕ್ಷ್ಮಿಕಾಂತ್ ಅವರು ತಮ್ಮ…

Read More