Author: Karavali TV

ಟೆಲಿಕಾಂ ವಲಯದಲ್ಲಿ ಗ್ರಾಹಕರನ್ನು ಆಕರ್ಷಿಸಲು ವಿವಿಧ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸಲಾಗುತ್ತಿದೆ. ಈ ನಡುವೆ ಏರ್‌ಟೆಲ್ ಗ್ರಾಹಕರಿಗೆ ಕೈಗೆಟುಕುವ ಬೆಲೆಯ ಮೂರು ರೀಚಾರ್ಜ್ ಪ್ಲಾನ್‌ಗಳ ಬಗ್ಗೆ ಗಮನ ಸೆಳೆದಿದೆ. ₹185, ₹203 ಮತ್ತು ₹206 ಬೆಲೆಯ ಈ ಯೋಜನೆಗಳಲ್ಲಿ ಅನಿಯಮಿತ ಕರೆ, ರಾಷ್ಟ್ರೀಯ ರೋಮಿಂಗ್ ಹಾಗೂ ಉಚಿತ ಎಸ್‌ಎಂಎಸ್ ಸೌಲಭ್ಯಗಳು ಲಭ್ಯವಿವೆ ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ. ₹185 ರೀಚಾರ್ಜ್ ಪ್ಲಾನ್ ಏರ್‌ಟೆಲ್‌ನ ₹185 ರೀಚಾರ್ಜ್ ಯೋಜನೆಯು ಕಡಿಮೆ ಬೆಲೆಯ ಆಯ್ಕೆಗಳಲ್ಲಿ…

Read More

ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯುವ ಅಭ್ಯಾಸ ಆರೋಗ್ಯಕ್ಕೆ ಉತ್ತಮ. ಕೆಲವರು ತಣ್ಣೀರಿನ ಬದಲು ಬಿಸಿ ಅಥವಾ ಉಗುರುಬೆಚ್ಚಗಿನ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ದೇಹಕ್ಕೆ ಅಗತ್ಯವಾದ ನೀರನ್ನು ಒದಗಿಸುವುದು ಆರೋಗ್ಯದ ದೃಷ್ಟಿಯಿಂದ ಮುಖ್ಯವಾದರೂ, ಬಿಸಿ ನೀರು ಕುಡಿಯುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ಪಾಲಿಸುವುದು ಅಗತ್ಯ. ಅತಿಯಾಗಿ ಬಿಸಿ ನೀರು ಕುಡಿಯುವುದು, ಕಡಿಮೆ ಸಮಯದಲ್ಲಿ ಹೆಚ್ಚು ನೀರು ಸೇವಿಸುವುದು ಹಾಗೂ ಬಿಸಿ ನೀರು ಕುಡಿದರೆ ಮಾತ್ರ ತೂಕ ಇಳಿಯುತ್ತದೆ ಎಂದು ನಂಬುವುದು ಸರಿಯಲ್ಲ.…

Read More

ಬೆಂಗಳೂರು: ರೇಷನ್ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರವು ಮತ್ತೊಮ್ಮೆ ಕಾಲಾವಕಾಶ ನೀಡಿದ್ದು, ಪಡಿತರ ಚೀಟಿ ಇ-ಕೆವೈಸಿ (e-KYC) ದೃಢೀಕರಣದ ಅಂತಿಮ ದಿನಾಂಕವನ್ನು ನವೆಂಬರ್ 10ರವರೆಗೆ ವಿಸ್ತರಿಸಿ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಅಕ್ಟೋಬರ್ 20 ಕೊನೆಯ ದಿನವಾಗಿತ್ತು. ಒಂದು ವರ್ಷಕ್ಕೂ ಹೆಚ್ಚು ಕಾಲದ ಹಿಂದೆ ಇ-ಕೆವೈಸಿ ಮಾಡಿಸಿದ ಸುಮಾರು 1,15,87,298 ಫಲಾನುಭವಿಗಳು ಮತ್ತೊಮ್ಮೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.…

Read More

ಬೆಂಗಳೂರು: ರಾಜ್ಯದಲ್ಲಿ ಮನೆಮನೆಗೆ ತೆರಳಿ ನಡೆಸಲಾಗುತ್ತಿರುವ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಪರಿಶೀಲನಾ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಗ್ರಾಹಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಮೀಕ್ಷೆಯ ವೇಳೆ ಮನೆಗೆ ಬೀಗ ಹಾಕಿದ್ದ ಕಾರಣದಿಂದ ಹಾಗೂ ಖಾಲಿ ಮನೆಗಳಿದ್ದ ಕಾರಣದಿಂದ ಪರಿಶೀಲನೆಗೆ ಒಳಪಡದ ಅರ್ಹ ಫಲಾನುಭವಿಗಳು ಅಕ್ಟೋಬರ್ 31ರೊಳಗೆ ತಮ್ಮ ಸಮೀಪದ ವಿದ್ಯುತ್ ಸರಬರಾಜು ಕಂಪನಿಯ (ಎಸ್ಕಾಂ) ಉಪವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ…

Read More

ಮೇಷ ರಾಶಿ ಈ ದಿನ ಹಣಕಾಸಿನ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುವಿರಿ. ಪ್ರಮುಖ ವ್ಯಕ್ತಿಗಳ ಭೇಟಿ, ವಿದೇಶ ಪ್ರಯಾಣದ ಪ್ರಯತ್ನ ಮತ್ತು ಕುಟುಂಬದಲ್ಲಿ ಅನಿರೀಕ್ಷಿತ ಲಾಭದ ಸಾಧ್ಯತೆಯಿದೆ. ವೃಷಭ ರಾಶಿ ವಿದೇಶ ಪ್ರಯಾಣದ ಪ್ರಯತ್ನಗಳಲ್ಲಿ ಪ್ರಗತಿ ಕಂಡರೂ ಆರೋಗ್ಯ ಸಮಸ್ಯೆ, ಖರ್ಚು ಹೆಚ್ಚಾಗಬಹುದು. ಬಂಧುಮಿತ್ರರೊಂದಿಗೆ ವಾಗ್ವಾದ ತಪ್ಪಿಸಿ, ಪ್ರಯಾಣದ ವೆಚ್ಚದ ಬಗ್ಗೆ ಎಚ್ಚರವಿರಲಿ. ಮಿಥುನ ಕೈಗೊಂಡ ಕೆಲಸಗಳಲ್ಲಿ ಅಡೆತಡೆ ಮತ್ತು ಹಣಕಾಸಿನ ಒತ್ತಡ ಎದುರಾಗಬಹುದು. ಬಂಧುಗಳೊಂದಿಗೆ ಭಿನ್ನಾಭಿಪ್ರಾಯ ತಪ್ಪಿಸಿ, ಕುಟುಂಬದ ವಿಚಾರಗಳಲ್ಲಿ…

Read More

ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಹಾಗೂ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಅವರು ಎಐಸಿಸಿ ಅಧ್ಯಕ್ಷರಿಗೆ ಪತ್ರ ರವಾನಿಸಿದ್ದಾರೆ. ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸುವಂತೆ ಈ ಮೊದಲು ಹಲವು ಬಾರಿ ಅಸಮಾಧಾನ ವ್ಯಕ್ತವಾಗಿದ್ದರೂ ಹೈಕಮಾಂಡ್‌ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸೌಮ್ಯಾ ರೆಡ್ಡಿ ಅವರು 2026ರ ಆಗಸ್ಟ್ 20ರಂದೇ…

Read More

ಕುಂದಾಪುರ: ನಿರ್ಮಾಣ ಹಂತದ ದೇವಸ್ಥಾನದಲ್ಲಿ ಶಿಲ್ಪಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ವಂಡ್ಸೆ ಗ್ರಾಮದ ಕಂಬಳಗದ್ದೆ ಬಳಿ ನಡೆದಿದೆ. ಕಾರ್ಕಳ ತಾಲೂಕಿನ ಕುಕ್ಕಂದೂರು ಗ್ರಾಮದ ನಿವಾಸಿ ಶಿವ ಅವರ ಮಗ ಶರತ್ ಕುಮಾರ್ (30) ಮೃತಪಟ್ಟ ದುರ್ದೈವಿ. ಕಳೆದ ಒಂದು ತಿಂಗಳಿಂದ ಇವರು ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಕಂಬಳಗದ್ದೆ ಬಳಿಯ ದೇವಸ್ಥಾನದಲ್ಲಿ ಶಿಲ್ಪಿ ಕೆಲಸ ಮಾಡಿಕೊಂಡಿದ್ದರು. ಅಕ್ಟೋಬರ್ 16 ರಂದು ಸಂಜೆ…

Read More

ಉಡುಪಿಯ ಎಸ್‌ಜಿಆರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆಸ್ತಿಯ ನಕಲಿ ದಾಖಲೆಗಳನ್ನು ನೀಡಿ ಒಟ್ಟು 1,00,00,500 ರೂ. ಸಾಲ ಪಡೆದು ವಂಚಿಸಿರುವ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಾದ ಯು. ಅಭಿಷೇಕ್ ಹಾಗೂ ರಮಾ ಜೆ. ರಾವ್ ಅವರು ಆಸ್ತಿಗೆ ಸಂಬಂಧಿಸಿದ ಕ್ರಯಸಾಧನ ಹಾಗೂ ಅಡಮಾನ ದಾಖಲೆಗಳನ್ನು ಸಲ್ಲಿಸಿ ಒಟ್ಟು 1.60 ಕೋಟಿ ರೂ. ಸಾಲಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಕಳೆದ ಸೆಪ್ಟೆಂಬರ್ 17ರಂದು…

Read More

ಬೆಂಗಳೂರು (ಅಕ್ಟೋಬರ್ 17): ಈಶಾನ್ಯ ಮಾರುತಗಳ ಆಗಮನ ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಮುಂಬರುವ ಅಕ್ಟೋಬರ್ 22ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಭವಿಷ್ಯ ನುಡಿದಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಜಾರಿಗೊಳಿಸಲಾಗಿದೆ. ಕರಾವಳಿ ಭಾಗದಲ್ಲಿ…

Read More

ಮಂಗಳೂರು: ಮಂಗಳೂರು ಸಂಸ್ಕರಣಾಗಾರ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ ಭೀಕರ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೌಕರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ. ಮೃತರನ್ನು ಸುರತ್ಕಲ್ ಸಮೀಪದ ಇಡ್ಡ್ಯಾ ಗ್ರಾಮದ ಕಾನ ನಿವಾಸಿ ರಾಜೇಶ್ ಡಿಸೋಜಾ ಅಲಿಯಾಸ್ ರಾಜೇಶ್ ಬ್ಯಾಪ್ಟಿಸ್ಟ್ (38) ಎಂದು ಗುರುತಿಸಲಾಗಿದೆ. ಇವರು ಕಳೆದ ಹಲವಾರು ವರ್ಷಗಳಿಂದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸ್ಫೋಟಗೊಂಡ ಘಟಕದಲ್ಲೇ ಕಾರ್ಯನಿರ್ವಹಿಸುತ್ತಿದ್ದ ರಾಜೇಶ್ ಅವರು ಶೇಕಡಾ 35ರಷ್ಟು…

Read More