ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಹಾಗೂ ಶ್ರೀ ಉತ್ತರಾದಿ ಮಠದ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಸಹಯೋಗದಲ್ಲಿ ಶಿಬಿರ ನಡೆಯಿತು. ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ…
Author: Karavali TV
ಉಡುಪಿ ಜಿಲ್ಲೆಯಲ್ಲಿ ಗಣೇಶೋತ್ಸವ–2026ರ ಹಿನ್ನೆಲೆಯಲ್ಲಿ ಶಾಂತಿಯುತ ಆಚರಣೆಗೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಜಿಲ್ಲೆಯಲ್ಲಿ ಒಟ್ಟು 492 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, 415 ಸಾಮಾನ್ಯ, 74 ಸೂಕ್ಷ್ಮ ಹಾಗೂ 3 ಅತಿಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಸೆಪ್ಟೆಂಬರ್ 14ರಿಂದ 29ರವರೆಗೆ ವಿವಿಧ ದಿನಗಳಲ್ಲಿ ವಿಸರ್ಜನೆ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 611 ಮಂದಿಯ ವಿರುದ್ಧ ಕ್ರಮ ಕೈಗೊಂಡು, 487 ಮಂದಿಯನ್ನು ಬಾಂಡ್ ಓವರ್ ಮಾಡಲಾಗಿದೆ. ಜಿಲ್ಲೆಯಾದ್ಯಂತ 22 ಶಾಂತಿ…
ಬೆಂಗಳೂರು: ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕರಾವಳಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್, ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ, ಮೀನುಗಾರಿಕೆ ವಿಶ್ವವಿದ್ಯಾಲಯ, ಆಧುನಿಕ ಅಕ್ವಾಪಾರ್ಕ್ ಹಾಗೂ ಮೀನುಗಾರರಿಗೆ ಪರಿಹಾರ ಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಇದರ ಜೊತೆಗೆ ಬ್ರಹ್ಮಾವರ…
ಕಾರ್ಕಳ: ಶಾಸಕ ಸುನೀಲ್ ಕುಮಾರ್ ಅವರ ತಲೆ ಕತ್ತರಿಸಿರುವ ರೀತಿಯಲ್ಲಿ ಫೋಟೋ ಬಳಸಿ ಪ್ರಚೋದನಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿ ಅವಾಚ್ಯ ಶಬ್ದ ಹಾಗೂ ಪ್ರಚೋದನಕಾರಿ ಹಾಡು ಬಳಸಿ ವಿಡಿಯೋ ಹರಿಬಿಟ್ಟಿರುವ ಬಗ್ಗೆ ವಿಘೇಶ್ ಪ್ರಸಾದ್ ರಾವ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಸಾದ್ ಶೆಟ್ಟಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆಯ ಬಳಿಕ…
ಉಡುಪಿ: ಗಣೇಶ ಚತುರ್ಥಿ ಆಚರಣೆ ಮತ್ತು ವಿಗ್ರಹ ವಿಸರ್ಜನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ವಿವಿಧ ದಿನಾಂಕಗಳಂದು ಮದ್ಯ ಮಾರಾಟವನ್ನು ನಿಷೇಧಿಸಿ (ಡ್ರೈ ಡೇ) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ವರೂಪ ಟಿ. ಕೆ. ಅವರು ಆದೇಶ ಹೊರಡಿಸಿದ್ದಾರೆ. ವಿಸರ್ಜನೆ ಮೆರವಣಿಗೆಯ ಸಮಯದಲ್ಲಿ ಮದ್ಯಪಾನ ಮಾಡಿ ಗಲಭೆ ಎಬ್ಬಿಸುವ ಸಾಧ್ಯತೆಗಳಿರುವುದರಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ…
ಉಡುಪಿ: ಕಾರ್ಕಳ ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸೆ.10ರಂದು ಕಾರ್ಕಳ ಗ್ರಾಮಾಂತರ ಪೊಲೀಸರು ಕಲ್ಯಾ ಗ್ರಾಮದ ಕ್ವಾರಿ ಬಳಿ ದಾಳಿ ನಡೆಸಿ, ಪರವಾನಿಗೆ ಇಲ್ಲದೆ ಸ್ಫೋಟಕ ಬಳಸಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪದಡಿ ಮೂರು ಟಿಪ್ಪರ್ ಲಾರಿ ಹಾಗೂ ಒಂದು ಹಿಟಾಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಸೆ.11ರಂದು ಕಲ್ಯಾ ಗ್ರಾಮದ ಸಿಎಂಎಸ್ ಸ್ಟೋನ್ ಕ್ರಶರ್‌ಗೆ ದಾಳಿ ನಡೆಸಿ,…
ಉಡುಪಿ: ಕಟಪಾಡಿ ಅಂಡರ್‌ಪಾಸ್ ಕಾಮಗಾರಿ ಪ್ರದೇಶದಲ್ಲಿ ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಲಾರಿ, ಪರ್ಯಾಯ ರಸ್ತೆ ಬದಲಾಗಿ ನೇರವಾಗಿ ಕಾಮಗಾರಿ ಪ್ರದೇಶಕ್ಕೆ ನುಗ್ಗಿದೆ. ಸೂಚನಾ ಫಲಕ ಗಮನಿಸದೆ ಮುಂದುವರಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎನ್ನಲಾಗಿದೆ.
ಉಡುಪಿ: ಪರಿಸರ ಸ್ನೇಹಿಯಾಗಿ ಗೌರಿ–ಗಣೇಶ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು. ಮಣಿಪಾಲದ ರಜತಾದ್ರಿಯಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಿಒಪಿ ಹಾಗೂ ರಾಸಾಯನಿಕ ಬಣ್ಣದ ಮೂರ್ತಿಗಳ ಬಳಕೆಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗಣೇಶ ಮೂರ್ತಿಗಳನ್ನು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಕೃತಕ ಅಥವಾ ತಾತ್ಕಾಲಿಕ ವಿಸರ್ಜನಾ ತೊಟ್ಟಿಗಳಲ್ಲೇ ವಿಸರ್ಜಿಸುವಂತೆ ಸಲಹೆ ನೀಡಿದರು. ಪಿಒಪಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟ ತಡೆಯಲು ನಿರಂತರ…
ಮೇಷಮೇಷ ರಾಶಿಯವರಿಗೆ ಹಣಕಾಸು ಯೋಜನೆ ಮಾಡಲು ಇಂದು ಉತ್ತಮ ದಿನ. ವೃತ್ತಿ ಜೀವನದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಪ್ರಯೋಜನಕಾರಿಯಾಗುತ್ತವೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದಂತೆ ದೀರ್ಘ ಪ್ರಯಾಣದ ಸಾಧ್ಯತೆಗಳಿವೆ. ಆಸ್ತಿ ಸಂಬಂಧಿತ ವಿವಾದಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಕಾನೂನು ವಿಷಯಗಳಲ್ಲಿ ಜಯ ದೊರೆಯಲಿದೆ. ಮಕ್ಕಳ ಕಡೆಯಿಂದ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ಇಂದು ಸಂಬಂಧಗಳಲ್ಲಿ ಭಾವನಾತ್ಮಕ ಏರಿಳಿತಗಳು ಸಾಧ್ಯ. ಸ್ವಯಂ ನಿಯಂತ್ರಣದಲ್ಲಿರಿ. ಅತಿಯಾದ ಕೋಪವನ್ನು ತಪ್ಪಿಸಿ.…
ಉಡುಪಿ: ಕಟಪಾಡಿ ಅಂಡರ್‌ಪಾಸ್ ಬಳಿ ಪಿಕಪ್ ವಾಹನದ ಹಿಂಬದಿಯ ಬಾಡಿಯಲ್ಲಿ ಸುಮಾರು 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಚಾಲನೆ ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು, KL 33 B 7463 ನೋಂದಣಿಯ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ವಾಹನ ಚಾಲಕನ ವಿರುದ್ಧ BNS ಹಾಗೂ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
