Author: Karavali TV

ಉಡುಪಿ: SIR ಪ್ರಕ್ರಿಯೆಯಲ್ಲಿ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯಲು ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದೆ. ರಮೇಶ್ ಕಾಂಚನ್ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಸೂಕ್ತ ದಾಖಲೆಗಳಿಲ್ಲದ ಹಾಗೂ ಬಾಡಿಗೆ ಮನೆಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯಲು ವಿಳಂಬವಾಗುತ್ತಿದೆ ಎಂದು ಆರೋಪಿಸಲಾಗಿದೆ. ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ, ಅರ್ಜಿ…

Read More

ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಒಂದು ದಿನದ ಮುಷ್ಕರಕ್ಕೆ ಇಂದು ಉಡುಪಿಯಲ್ಲೂ ಬ್ಯಾಂಕ್ ಸಿಬ್ಬಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, UFBU ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರದ ಪ್ರಮುಖ ಬೇಡಿಕೆಗಳಲ್ಲಿ ವಾರದಲ್ಲಿ ಐದು ದಿನ ಬ್ಯಾಂಕ್ ಕಾರ್ಯನಿರ್ವಹಿಸುವ ವ್ಯವಸ್ಥೆ ಜಾರಿಗೆ ತರಬೇಕು, ವೇತನ ಹಾಗೂ ಪಿಂಚಣಿ ಸೇರಿದಂತೆ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬುದು ಪ್ರಮುಖವಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ…

Read More

ಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಆಗಮಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೆ.11ರ ನಸುಕಿನ ಜಾವ ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಎರಡು ಕಾಡುಕೋಣಗಳು ರಸ್ತೆಯಲ್ಲಿ ಕಾಣಿಸಿಕೊಂಡಿವೆ. ರಸ್ತೆಯಲ್ಲಿ ಕಾಡುಕೋಣಗಳನ್ನು ಕಂಡು ಸಾರ್ವಜನಿಕರು ಹಾಗೂ ವಾಹನ ಸವಾರರು ಕೆಲಕಾಲ ಆತಂಕಗೊಂಡರು. ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡುಕೋಣಗಳು ಜನವಸತಿ ಪ್ರದೇಶಗಳತ್ತ ಬರುತ್ತಿರುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು…

Read More

ಮಲ್ಪೆ: ಬೋಟಿನಿಂದ ಆಕಸ್ಮಿಕವಾಗಿ ಧಕ್ಕೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಮೃತರನ್ನು ದಯಾನಂದ ಕೋಡಾರಕರ (59) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 9ರಂದು ಮೀನುಗಾರಿಕೆಯಿಂದ ಮರಳಿದ್ದ ದಯಾನಂದ ಅವರು, ರಾತ್ರಿ ಮತ್ತೆ ಮೀನುಗಾರಿಕೆ ಕೆಲಸಕ್ಕೆ ತೆರಳಲು ಬಲೆ ಸಿದ್ಧಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬೋಟಿನಿಂದ ಧಕ್ಕೆಗೆ ಬಿದ್ದು ನೀರಿಗೆ ಬಿದ್ದಿದ್ದಾರೆ. ಬಳಿಕ ಅವರು ಕಾಣೆಯಾಗಿದ್ದರು. ಸತತ ಹುಡುಕಾಟದ ಬಳಿಕ ಸೆಪ್ಟೆಂಬರ್ 10ರಂದು ಬೆಳಗ್ಗೆ ಸುಮಾರು 10.10ಕ್ಕೆ…

Read More

ಮೇಷ ಸಂಗಾತಿಯಿಂದ ಮುಚ್ಚಿಟ್ಟಿರುವ ಯಾವುದೇ ವಿಷಯ ಕುಟುಂಬದಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ಇದರಿಂದ ಸಂಜೆಯ ವೇಳೆಗೆ ಮನೆಯಲ್ಲಿ ಸಣ್ಣಪುಟ್ಟ ಮನಸ್ತಾಪ ಅಥವಾ ಅಸಮಾಧಾನ ಉಂಟಾಗಬಹುದು. ಆದರೆ ಇತ್ತೀಚೆಗೆ ಕಾಡುತ್ತಿದ್ದ ಮಾನಸಿಕ ಒತ್ತಡ ನಿಧಾನವಾಗಿ ಕಡಿಮೆಯಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವಿಶೇಷವಾಗಿ ಪ್ರಣಯ ಸಂಬಂಧದ ವಿಚಾರವನ್ನು ಕುಟುಂಬದವರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರಿಕೆಯಿಂದ ಯೋಚಿಸಿ. ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ವೃಷಭ ಕೆಲಸಕ್ಕೆ ಸಂಬಂಧಿಸಿದ ಪ್ರಮುಖ…

Read More

ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಮತ್ತೊಬ್ಬ ವ್ಯಕ್ತಿಯಂತೆ ನಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದಡಿ ಉಡುಪಿ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿ ನೋಮಾನ್‌ಗೆ ಜಾಮೀನು ನೀಡುವ ವೇಳೆ, ಫಾರೂಕ್ ಎಂಬಾತ ಮತ್ತೊಬ್ಬರ ಆಧಾರ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು…

Read More

ಸುಬ್ರಹ್ಮಣ್ಯ: ಯಶವಂತಪುರ–ಮಂಗಳೂರು ನಡುವೆ 16 ಕೋಚ್‌ಗಳ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮತ್ತೊಂದು ಹಂತದ ಪ್ರಾಯೋಗಿಕ ಸಂಚಾರ ಇಂದು ನಡೆಯಲಿದೆ. ಯಶವಂತಪುರದಿಂದ ಬೆಳಗ್ಗೆ 6.50ಕ್ಕೆ ಹೊರಡುವ ರೈಲು ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್ ಹಾಗೂ ಕಬಕ ಪುತ್ತೂರು ಮಾರ್ಗವಾಗಿ ಮಧ್ಯಾಹ್ನ 2.40ಕ್ಕೆ ಮಂಗಳೂರು ಜಂಕ್ಷನ್ ತಲುಪುವ ನಿರೀಕ್ಷೆಯಿದೆ. ಘಾಟ್ ಪ್ರದೇಶದಲ್ಲಿ ರೈಲಿನ ವೇಗ, ಸುರಕ್ಷತೆ ಹಾಗೂ ಕಾರ್ಯಾಚರಣಾ ಸಾಮರ್ಥ್ಯ ಕುರಿತು ವಿಶೇಷ ಪರಿಶೀಲನೆ ನಡೆಯಲಿದೆ. ಈ ಟ್ರಯಲ್ ರನ್ ಬಳಿಕ…

Read More

ಉಡುಪಿ: ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಉಡುಪಿ ಟೌನ್‌ಹಾಲ್‌ನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ ಆಶ್ರಯದಲ್ಲಿ ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಸದಸ್ಯರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ, ಧ್ವನಿವರ್ಧಕ ಬಳಕೆ, ವಾಹನ ಸಂಚಾರ, ಪಾರ್ಕಿಂಗ್, ಅಗ್ನಿ ಸುರಕ್ಷತೆ ಹಾಗೂ ಪರಿಸರ ಸ್ನೇಹಿ ಆಚರಣೆ ಕುರಿತು ಅಗತ್ಯ ಮಾರ್ಗಸೂಚಿಗಳನ್ನು ನೀಡಲಾಯಿತು. ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಕಾನೂನುಬದ್ಧವಾಗಿ ಆಚರಿಸುವಂತೆ ಪೊಲೀಸ್ ಇಲಾಖೆ ಸೂಚಿಸಿತು. ಸಭೆಯಲ್ಲಿ ಎಸ್ಪಿ…

Read More

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ಭಕ್ತರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿಗಳು ‘Hotel Accommodation’ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ, ಜಗದಾಂಬಿಕಾ ಅತಿಥಿ ಗೃಹದ ಕೊಠಡಿ ಕಾಯ್ದಿರಿಸುವುದಾಗಿ ಭಕ್ತರನ್ನು ನಂಬಿಸುತ್ತಿದ್ದರು ಎನ್ನಲಾಗಿದೆ. ವಾಟ್ಸ್‌ಆಪ್‌ ಮೂಲಕ ಸಂಪರ್ಕಿಸಿ ಫೋನ್‌ಪೇ ಕ್ಯೂಆರ್ ಕೋಡ್‌ ಕಳುಹಿಸಿ ಹಣ ಪಡೆದು, ಬಳಿಕ ನಕಲಿ ರಶೀದಿ ನೀಡಿ ವಂಚಿಸಲಾಗುತ್ತಿತ್ತು ಎಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ದೂರು ನೀಡಿದ್ದಾರೆ. ಈ ಸಂಬಂಧ…

Read More