ಬೆಂಗಳೂರು : ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಗೌರಿಹಬ್ಬ ದಂದು (ಸೆ. 6) ಚಾಲನೆ ದೊರೆಯಲಿದ್ದು, ನೀರನ್ನು ಮೇಲಕ್ಕೆ ಎತ್ತುವ ಪಂಪ್‌ಗ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವೇಳೆಗೆ ಒಟ್ಟಾರೆ 5 ಟಿಎಂಸಿ ನೀರೆತ್ತಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪಂಪ್ ಮಾಡಿದ ನೀರನ್ನು ವೇದಾ ವ್ಯಾಲಿಯ ಮೂಲಕ 132 ಕಿ.ಮೀ. ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುವುದು. ತಾತ್ಕಾಲಿಕವಾಗಿ…
Author: Karavali TV
ಬೆಂಗಳೂರು : ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ಒಂದು ವಾರಗಳ ಬಳಿಕ ಮಧ್ಯಂತರ ರಿಲೀಫ್ ಸಿಕ್ಕಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ 2ನೇ ಬಾರಿಗೆ ಮುಂದೂಡಿಕೆಯಾಗಿದೆ. ಗಣೇಶ ಹಬ್ಬದ ಬಳಿಕ ಸೆಪ್ಟೆಂಬರ್ 9 ರಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಪ್ಯಾರಿಸ್ ಪ್ಯಾರಾಲಿಂಪಿಕ್ಸ್-2024 ನಿರೀಕ್ಷೆಗಳಿಗೂ ಮೀರಿದ ಸಂಗತಿಗಳಿಗೆ ಸಾಕ್ಷಿ ಆಗ್ತಿದೆ. 7 ತಿಂಗಳ ತುಂಬು ಗರ್ಭಿಣಿ ಪ್ಯಾರಾ ಅಥ್ಲೀಟ್ ಪದಕ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ! ಗ್ರೇಟ್ ಬ್ರಿಟನ್‌ನ ಜೋಡೀ ಗ್ರಿನ್‌ಹ್ಯಾಮ್ ಈ ಸಾಧನೆ ಮಾಡಿದ್ದಾರೆ. ಗ್ರಿನ್‌ಹ್ಯಾಮ್ ಅವರು ಬಿಲ್ಲುಗಾರಿಕೆಯಲ್ಲಿ ಪದಕ ಗೆದ್ದಿದ್ದಾರೆ. ಈ ಮೂಲಕ ಜಗತ್ತಿನಾದ್ಯಂತ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇದೀಗ ಅವರ ಧೈರ್ಯವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಗ್ರಿನ್‌ಹ್ಯಾಮ್ ಕಂಚಿನ ಪದಕ ಗೆದ್ದರು. ಆಗಸ್ಟ್ 31 ರಂದು ಗ್ರಿನ್‌ಹ್ಯಾಮ್ ಮಹಿಳಾ ಕಾಂಪೌಂಡ್‌ನಲ್ಲಿ…
ಉಡುಪಿ : ಜಿಲ್ಲೆಯಲ್ಲಿ ಟೆಂಪಲ್ ರನ್ ನಲ್ಲಿರುವ ತೆಲುಗಿನ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿಆರ್ ರಿಷಬ್ ಶೆಟ್ಟಿ ತವರೂರು ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಟ ರಿಷಬ್ ಶೆಟ್ಟಿ ಜೊತೆ ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಜೂನಿಯರ್ ಎನ್‌ಟಿಆರ್ ಅವರನ್ನು ರಿಷಬ್ ಶೆಟ್ಟಿ ತಮ್ಮ ಊರಾದ ಕೆರಾಡಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಹೋಗಿರುವ ಜೂನಿಯರ್ ಎನ್‌ಟಿಆರ್…
ಬೆಂಗಳೂರು : ಎರಡು ತಿಂಗಳ ಒಳಗಾಗಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಲೋಕಸೇವಾ ಆಯೋಗ (KPSC)ಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, “ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ…
ಉಡುಪಿ : ಇ ಸಿಗರೇಟ್ ಮಾರಾಟಕ್ಕೆ ನಿಷೇಧವಿದ್ದರೂ ಮಣಿಪಾಲ ಭಾಗದಲ್ಲಿ ಮತ್ತೆ ಇ ಸಿಗರೇಟ್ ಹಾವಳಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್ ಹಾಗೂ ಸಾವಿರಾರು ರೂ.ಮೌಲ್ಯದ ಇ ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಯು ಇನ್ನೊಬ್ಬನೊಂದಿಗೆ ಸೇರಿಕೊಂಡು ಈ ವ್ಯವಹಾರ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ನಿಷೇಧಿತ ಇ ಸಿಗರೇಟ್‌ಗಳನ್ನು…
ಉಡುಪಿ : ಜಿಲ್ಲೆಯ ಒಟ್ಟು 4 ದ್ವೀಪಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ ಆಸುಪಾಸಿನ ಕಡಲ ತೀರದಲ್ಲಿರುವ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ…
ಕೊಟ್ಟಿಗೆಹಾರ : ಸರ್ಕಾರದ ನಿರ್ಬಂಧದ ನಡುವೆಯೂ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ಎತ್ತಿನಭುಜದಲ್ಲಿ ಭಾನುವಾರ ಮತ್ತೆ 200ಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ. ಸರ್ಕಾರದ ನಿಯಮ, ಅರಣ್ಯ ಸಚಿವರ ಆದೇಶಕ್ಕೆ ಬೆಲೆ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ. ಸರ್ಕಾರದ ಮಟ್ಟದಲ್ಲಿ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಒಂದು ಕಾನೂನು ಮಾಡಿದರೆ, ಜಿಲ್ಲೆ-ತಾಲೂಕು ಕೇಂದ್ರದಲ್ಲಿನ ಅಧಿಕಾರಿಗಳು ಮತ್ತೊಂದು ಮಾಡುತ್ತಾರೆ. ಜನ ಸಾಮಾನ್ಯರು ಹಾಗೂ ಪ್ರಕೃತಿ ಅನುಕೂಲಕ್ಕಾಗಿ ಒಂದು ಕಾನೂನನ್ನ ಜಾರಿಗೆ ತಂದಿದ್ದರೆ ಅಧಿಕಾರಿಗಳು…
ಬಾದ್ಷಾ ಕಿಚ್ಚ ಸುದೀಪ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 51ನೇ ವರ್ಷಕ್ಕೆ ಸುದೀಪ್ ಕಾಲಿಟ್ಟಿದ್ದಾರೆ. ಅಭಿಮಾನಿಗಳ ಜೊತೆಗೆ ಭರ್ಜರಿಯಾಗಿ ಹುಟ್ಟುಹಬ್ಬ ಸೆಲೆಬ್ರೇಶನ್ ಮಾಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಕಿಚ್ಚ ಕೂಡ ತನ್ನ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಸುದೀಪ್ ಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಮ್ಯಾಕ್ಸ್ ತಂಡ ಮಾಸ್ ಸಾಂಗ್ ರಿಲೀಸ್ ಮಾಡಿದೆ. ‘ಅಪ್ಪಂಗೆ ಹುಟ್ಟಿದ್ರೆ ತೊಡೆ ತಟ್ಟಿ ಬಾರೋ’ ಎಂದು ಮ್ಯಾಕ್ಸಿಮಮ್ ಮಾಸ್ ಹಾಡಿನ ಮೂಲಕ ಫ್ಯಾನ್ಸ್ಗೆ ಸರ್ಪ್ರೈಸ್ ನೀಡಿದ್ದಾರೆ. ವಿಜಯ್…
ಉಡುಪಿ : ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಸಮೀಪದಲ್ಲಿ ನಡೆದಿದೆ. ಸಚಿನ್ ಎಂಬ ವ್ಯಕ್ತಿ ಮೀನಿಗೆ ಬಲೆ ಬೀಸುತ್ತಿದ್ದ ವೇಳೆ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದ. ಈತನ ರಕ್ಷಣೆ ಮಾಡುವುದಕ್ಕೆ ಸತತ ಒಂದು ಗಂಟೆಗಳ ಕಾಲ ಸ್ಥಳೀಯರು ಶೋಧಕಾರ್ಯ ನಡೆಸಿದರು. ಶರ್ಮಾ, ಹರೀಶ್, ಬಾಲಕೃಷ್ಣ ಕೋಟ್ಯಾನ್, ಚಂದ್ರಶೇಖರ್ ಎಂಬವರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನ ರಕ್ಷಿಸಿದ್ದಾರೆ.
