ಬೆಂಗಳೂರು: ಒಂದು ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿಗಳು ವಾಪಸ್ ಕರೆಸಿಕೊಳ್ಳದಿದ್ದರೆ ಬಾಂಗ್ಲಾದೇಶ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ ಎಂಬ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ನೀಡಿರುವ ಹೇಳಿಕೆ, ಭಾರೀ ವಿವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೇರುವ ಬಿಜೆಪಿ…
Author: Karavali TV
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಷ್ಟ್ರಪತಿಗಳನ್ನು ಭೇಟಿ ಮಾಡಿ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಷ್ಟ್ರಪತಿಗಳನ್ನು ಭೇಟಿ ಮಾಡಿ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ. ಇಂದು ವಿಧಾನಸೌಧದ…
ಉಡುಪಿ: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಂಚಿನಡ್ಕದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯ ವಿವಿಧ ಸಂಘಟನೆಗಳು, ಕಾಪು, ಕಾರ್ಕಳ, ಉಡುಪಿ, ಮೂಲ್ಕಿ ತಾಲೂಕು ಮತ್ತು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸುತ್ತಲಿನ 40 ಗ್ರಾಮಗಳ ಸಾರ್ವಜನಿಕರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಬಳಿಕ ಕಂಚಿನಡ್ಕದಿಂದ ಪಡುಬಿದ್ರಿ…
ಬೆಂಗಳೂರು: ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 1 ರಿಂದ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಅಬಕಾರಿ ಆದಾಯ ಹೆಚ್ಚಿಸಲು ಮದ್ಯದ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಮದ್ಯದ ದರ ಇಳಿಕೆಯಾಗಲಿದೆ. ದರ ಇಳಿಕೆ ಮಾಡುವಂತೆ ಅಬಕಾರಿ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜುಲೈ1 ರಿಂದ ಮದ್ಯ ದರ…
ಉಡುಪಿ: ಕಾರ್ಕಳದಲ್ಲಿ ನಡೆದ ಓರ್ವ ಹಿಂದೂ ಸಹೋದರಿಯ ಅತ್ಯಾಚಾರ ಪ್ರಕರಣ ಇಡೀ ಉಡುಪಿ ಜಿಲ್ಲೆಯ ಜನತೆ ತಲೆ ತಗ್ಗಿಸುವಂತದ್ದು ಈ ರೀತಿಯ ಪ್ರಕರಣಗಳು ಉತ್ತರ ಭಾರತದಲ್ಲಿ ನಮಗೆ ನೋಡಲು ಸಿಗುವುದಿದ್ದರೂ ಕೂಡ, ಇಂತಹ ಒಂದು ಪ್ರವೃತ್ತಿ ಅದರಲ್ಲೂ ಕ್ರೂರಿ ಯುವಕರಿಗೆ ಇಂತಹ ದುಷ್ಕೃತ್ಯ ಮಾಡುವ ಯೋಚನೆ ಬರಬೇಕಾದರೆ ಅವರಿಗೆ ಕಾನೂನಿನ ಭಯ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕುಕೃತ್ಯಗಳು ಮುಂದೆ ನಡೆಯದಂತೆ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಕಾರ್ಯೋನ್ಮುಖವಾಗಬೇಕು ಮತ್ತು…
